ಕುಂದಾಪುರದ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ ಸ್ಪರ್ಧೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ವಿದ್ಯಾರ್ಥಿಗಳಲ್ಲಿ ಹಾಸ್ಯ ಪ್ರಜ್ಞೆ ಮಾಯವಾಗುತ್ತಿದೆ. ದುಗುಡ ಹೆಚ್ಚುತ್ತಿದೆ. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ವೃಧ್ಧಿಯಾಗಲು, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಗತ್ಯವಿದೆ. ವಿದ್ಯಾರ್ಥಿಗಳು ಒಳ್ಳೆಯ ಹವ್ಯಾಸಗಳನ್ನು ವೃಧ್ಧಿಸಿಕೊಂಡು, ಸದಭಿರುಚಿಗಳನ್ನು ಬೆಳೆಸಿಕೊಂಡು ಮುಂದುವರಿದಲ್ಲಿ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಹುರಿದುಂಬಿಸುವ ಮಹತ್ತರ ಜವಾಬ್ದಾರಿ ಶಿಕ್ಷಕ ವರ್ಗದ ಮೇಲಿದೆ ಎಂದು ನಿವೃತ್ತ ಪ್ರಾಚಾರ್ಯರೂ, ಬರಹಗಾರ ಡಾ. ಜಯಪ್ರಕಾಶ್ ಮಾವಿನಕುಳಿಯವರು ನುಡಿದರು.

Call us

Call us

Click Here

Visit Now

ಕುಂದಾಪುರದ ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ನಡೆದ, ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಅವರು ಮಾತನಾಡಿದರು.

Click here

Click Here

Call us

Call us

ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಬಿ ಎಂ ಸುಕುಮಾರ ಶೆಟ್ಟಿ ಮಾತನಾಡಿ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಉತ್ತೇಜನ ನೀಡಲಾಗುತ್ತಿದೆ. ಆಧುನಿಕ ಕಾಲದ ಎಲ್ಲಾ ಸ್ಪರ್ಧೆ , ಪೈಪೋಟಿಗಳಿಗೆ ಸಿಧ್ಧರಾಗುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು.
ಕುಂದಾಪುರ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾದ ಪ್ರೊ. ಎ ಪಿ ಮಿತ್ತ್ತಂತಾಯ ಶುಭ ಹಾರೈಸಿದರು. ಭೌತಶಾಸ್ತ್ರ ಉಪನ್ಯಾಸಕರಾದ ಸಂದೀಪ್ ಶೆಣೈ ಸ್ವಾಗತಿಸಿದರು. ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿಯವರು ಪ್ರಾಸ್ತಾವಿಕ ಭಾಷಣ ಮಾಡಿದರು. ಸಂಸ್ಕೃತ ಉಪನ್ಯಾಸಕರಾದ ರವಿ ಉಪಧ್ಯಾಯರು ಉದ್ಘಾಟಕರ ಪರಿಚಯ ಮಾಡಿದರು. ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳ ಬಹುಮಾನವನ್ನು ಗಣ್ಯರು ವಿತರಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಕುಮಾರಿ ಜಾನಿಸ್ ನತಾಶಾ ಡಿ ಸೋಜಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ಪ್ರತಿಭಾ ಪ್ರದರ್ಶನ ಸ್ಪರ್ಧೆಯ ನಿರ್ಣಾಯಕರಾಗಿ ಕುಂದಾಪುರ ಸ ಪ ಪೂ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕರಾದ ರಾಜೀವ ನಾಯಕ್, ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕರಾದ ಸುಧಾಕರ್, ವಿ ಕೆ ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕನ್ನಡ ಶಿಕ್ಷಕಿ ಗೀತಾದೇವಿ ಇವರು ಸಹಕರಿಸಿದರು. ಗಣಿತ ಶಾಸ್ತ್ರ ಉಪನ್ಯಾಸಕಿ ಶುಭಾ ವಂದನಾರ್ಪಣೆಗೈದರು. ಹಿಂದಿ ಉಪನ್ಯಾಸಕಿ ಜಯಶೀಲಾ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Leave a Reply

Your email address will not be published. Required fields are marked *

14 + 14 =