ಕುಂದಾಪುರ: ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಗಣಿ ಅಧಿಕಾರಿಗಳು ದಾಳಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ವಿವಿಧಡೆ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿದ ಗಣಿ ಇಲಾಖೆಯ ಅಧಿಕಾರಿಗಳು, ಕುಂದಾಪುರ ತಹಶೀಲ್ದಾರರು ಈ ಪ್ರದೇಶಗಳಲ್ಲಿನ ಮರಳನ್ನು ವಶಪಡಿಸಿಕೊಂಡಿದ್ದಾರೆ.

Call us

Call us

Call us

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಡಾ| ಮಹದೇಶ್ವರ, ತಹಶೀಲ್ದಾರ್‌ ಜಿ.ಎಂ. ಬೋರ್ಕರ್‌ ಅವರು ಕುಂದಾಪುರ ಪೊಲೀಸರ ಸಹಕಾರದಲ್ಲಿ ಹಳ್ನಾಡು ಸೇರಿದಂತೆ ತಾಲೂಕಿನ ವಿವಿಧಡೆ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ದಾಳಿ ನಡೆಸಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದಲ್ಲಿ ಶೇಖರಿಸಿ ಇಟ್ಟ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮರಳುಗಾರಿಕೆ ನಡೆಸುತ್ತಿದ್ದವರಿಗೆ ಸೂಚನೆ ನೀಡಿದ ಅಧಿಕಾರಿಗಳು ಈ ಪ್ರದೇಶದಲ್ಲಿ ಅಧಿಕೃತವಾಗಿ ಮರಳುಗಾರಿಕೆ ನಡೆಸಲು ಟೆಂಡರ್‌ ಅಗಿದ್ದು ಅವರಿಗೆ ಅವಕಾಶ ಮಾಡಿಕೊಡಬೇಕು. ಇನ್ನು ಮುಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿದಲ್ಲಿ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎನ್ನುವ ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

fifteen − four =