ಕುಂದಾಪುರ ಆರ್. ಎನ್. ಶೆಟ್ಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸಮಾಜದಲ್ಲಿ ಸರಿಯಾಗಿ ಜೀವಿಸಬೇಕಾದರೆ ಕಾನೂನಿನ ಅಗತ್ಯತೆ ಇದೆ. ಪ್ರತಿಯೊಂದು ಕಾನೂನು ಒಂದಲ್ಲ ಒಂದು ಪ್ರಯೋಜನವನ್ನು ನೀಡುತ್ತದೆ. ಕಾನೂನಿನ ಅರಿವು ಇಲ್ಲದಿದ್ದಲ್ಲಿ ನಾವು ನೀವೆಲ್ಲ ಒಳ್ಳೆಯ ಪ್ರಜೆಗಳಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಬಹುಸಂಖ್ಯೆಯ ವಿದ್ಯಾರ್ಥಿ ಸಮೂಹಕ್ಕೆ ಅರಿವು ಮೂಡಿಸುವುದು ಕಾನೂನು ಪ್ರಾಧಿಕಾರದ ಧ್ಯೇಯವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಕಾನೂನಿನ ಪ್ರಕ್ರಿಯೆಗಳನ್ನು ಮನವರಿಕೆ ಮಾಡಿಕೊಂಡು ಗೌರವದಿಂದ ಜೀವನ ನಡೆಸುವಂತಾಗಬೇಕು ಎಂದು ಬೆಂಗಳೂರು ಜಿಲ್ಲಾ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇದರ ಸದಸ್ಯ ಎಚ್. ಶಶಿಧರ್ ಶೆಟ್ಟಿ ಹೇಳಿದರು.

Call us

Call us

ಅವರು, ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನುನು ಸೇವಾ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ (ರಿ), ಲಯನ್ಸ್ ಕ್ಲಬ್ ಬನ್ನಾಡಿ, ವಡ್ಡರ್ಸೆ, ಲಯನ್ಸ್ ಕ್ಲಬ್ ಕುಂದಾಪುರ ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ‘ ವಿದ್ಯಾರ್ಥಿಗಳಿಗೆ ಕಾನೂನು ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Call us

Call us

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಹಿರಿಯ ವಕೀಲರಾದ, ರೊಟೇರಿಯನ್, ಎಡ್ವೊಕೇಟ್ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ, ಇಂದು ಯುವಜನರಲ್ಲಿ ಹೆಚ್ಚುತ್ತಿರುವ ಮಾದಕದ್ರವ್ಯ ವ್ಯಸನದಿಂದಾಗುವ ಅಪರಾಧ-ಸಂಬಂಧಿ ಶಿಕ್ಷೆಗಳನ್ನು ಮತ್ತು ಲೈಂಗಿಕ ಶೋಷಣಾ ವಿಷಯಧಾರಿತ ಕಾನೂನು ವಿಧಿಗಳ ಬಗ್ಗೆ ನಿದರ್ಶನಗಳ ಮೂಲಕ ವಿವರಿಸಿದರು.

ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಎಡ್ವೊಕೇಟ್ ನಿರಂಜನ ಹೆಗ್ಡೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ರವೀಂದ್ರ ಎಮ್. ಜೋಷಿ, ಗೌರವಾನ್ವಿತ ಸಿವಿಲ್ ಮತ್ತು ಜೆ.ಎಮ್. ಎಫ್.ಸಿ ನ್ಯಾಯಾಧೀಶರಾದ ನಾಗರತ್ನಮ್ಮ, ಬನ್ನಾಡಿ-ವಡ್ಡರ್ಸೆ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ, ಕುಂದಾಪುರ ಲಯನ್ ಬಿ. ಅಧ್ಯಕ್ಷರಾದ ರಾಧಾಕೃಷ್ಣ ನಾಯಕ್ ಉಪಸ್ಥಿತರಿದ್ದರು.

ಕುಂದಾಪುರ ವಕೀಲರ ಸಂಘದ ಕಾರ್ಯದರ್ಶಿ, ಪ್ರಮೋದ್ ಹಂದೆ ವಿದ್ಯಾರ್ಥಿಗಳಿಗೆ ವಿವಿಧ ಕಾನೂನು ವಿಚಾರಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. ಬನ್ನಾಡಿ- ವಡ್ಡರ್ಸೆ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಷ್ಮಾ ಶೆಣೈ ಅತಿಥಿಗಳಿಗೆ ಪುಷ್ಪ ನೀಡಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಿ. ಬಿ. ಕೃಷ್ಣಮೂರ್ತಿ ವಂದನಾರ್ಪಣೆಗೈದರು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಜಯಶೀಲಾ ಪೈ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

6 − 1 =