ಕುಂದಾಪುರ: ಉಡುಪಿ ಜಿಲ್ಲಾ ವಿಶೇಷ ಶಿಕ್ಷಣ ಶಿಕ್ಷಕರ ಸಮಾವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ವಿಶೇಷ ಶಿಕ್ಷಣ ಶಿಕ್ಷಕರ ಸಮಾವೇಶ ಕುಂದಾಪುರ ನೌಕರರ ಭವನದ ಕಛೇರಿ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಉಡುಪಿ ಜಿಲ್ಲಾ ವಿಶೇಷ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಗಣಪತಿ ಹೋಬಳಿದಾರ್ ಬೈಂದೂರು, ವಿಶೇಷ ಶಿಕ್ಷಕರ ಸಮಸ್ಯೆಯನ್ನು ವಿವಿಧ ಸಂಘಟನೆಗಳ ಸಹಕಾರದಿಂಧ ರಾಜ್ಯ ಸಂಘದಲ್ಲಿ ಚರ್ಚಿಸಿ ಪರಿಹಾರಕ್ಕೆ ಶ್ರಮಿಸುವುದಾಗಿ ತಿಳಿಸಿದರು.

ಮುಖ್ಯ ಅಥಿತಿಗಳಾಗಿ ಕುಂದಪುರ ನೌಕರರ ಸಂಘದ ಅಧ್ಯಕ್ಷರಾದ ದಿನಕರ ಶೆಟ್ಟಿ ಮಾತನಾಡಿ, ವಿಶೇಷ ಶಿಕ್ಷಕರಿಗಾಗಿ ಜಿಲ್ಲಾ ಪ್ರಶಸ್ತಿ ವಿಜೇತ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಶಿಕ್ಷಕರ ಹೋರಾಟಕ್ಕೆ ಸದಾ ಸಹಕರಿಸುವುದಾಗಿ ಹೆಳಿದರು.

ಈ ಸಂದರ್ಭದಲ್ಲಿ ವಿಶೇಷ ಶಿಕ್ಷಕರಾಗಿ ಶಾಲಾ ಅಭಿವೃದ್ಧಿಯಲ್ಲಿ ಸಕ್ರಿಯರಾಗಿ ಜಿಲ್ಲಾ ಪ್ರಶಸ್ತಿ ವಿಜೇತ ಚಂದ್ರಶೇಖರ ಸೆಟ್ಟಿ ಮತ್ತು ಜಿಲ್ಲಾ ವಿಶೇಷ ಶಿಕ್ಷಣ ಅಧಿಕಾರಿಯಾಗಿ ನಿವೃತ್ತರಾಗಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ತರಬೇತಿ ಕೇಂದ್ರ ರಚನೆಗೆ ಶ್ರಮಿಸುತ್ತಿರುವ ಗಂಗೆ ಶ್ಯಾನುಭಾಗ್ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕಾರಿಣಿ ಸಮಿತಿಯ ಸಂಘಟನಾ ಕಾರ್ಯದರ್ಶಿ ಶಾಲಿನಿ ಬ್ರಹ್ಮಾವರ, ಕುಂದಾಪುರ ತಾಲೂಕು ಪದವೀಧರ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸರ್ವರನ್ನು ಶಂಕರ್ ಕುಲಾಲ ಸ್ವಾಗತಿಸಿದರು ಕಾರ್ಯದರ್ಶಿ ಮಹೇಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯೋಪಾಧ್ಯಾರಾದ ಸೀತರಾಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು ನೆಂಪು ಶಾಲಾ ಮುಖ್ಯೋಪಾಧ್ಯಾಯರಾದ ಕುಪ್ಪಯ್ಯ ಮರಾಠಿ ಧನ್ಯವಾದ ಸಲ್ಲಿಸಿದರು.

 

Leave a Reply

Your email address will not be published. Required fields are marked *

5 × 1 =