ಕುಂದಾಪುರ : ಓದುಗ ತಿಂಗಳು ಕಾರ್ಯಕ್ರಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪುಸ್ತಕದಿಂದ ಸಿಗುವ ಜ್ಞಾನ ಬೇರೆ ಎಲ್ಲಿಯೂ ಸಿಗುವುದಿಲ್ಲ ಆದ್ದರಿಂದ ಪುಸ್ತಕಗಳ ಬಗ್ಗೆ ಇರುವ ಉದಾಸೀನ ಮನೋಭಾವ ದೂರವಾಗಬೇಕು ಎಂದು ಸಾಹಿತಿ ಪಾರ್ವತಿ ಜಿ ಐತಾಳ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Call us

Call us

Visit Now

ಅವರು ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಕುಂದಾಪುರ ಶಾಖಾ ಗ್ರಂಥಾಲಯದಲ್ಲಿ, ಭಾರತ ಸರ್ಕಾರದ ನೀತಿ ಆಯೋಗ, ನವದೆಹಲಿ ಇದರ ಸೂಚನೆಯಂತೆ ಸಾರ್ವಜನಿಕರಲ್ಲಿ ಓದುವ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಓದುಗ ತಿಂಗಳು ಕಾರ್ಯಕ್ರಮದ ನಿಮಿತ್ತ ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮಟ್ಟದಿಂದ ಕಾಲೇಜು ಮಟ್ಟದವರೆಗೂ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.

Click here

Call us

Call us

ನಿಗದಿತ ಅಧ್ಯಯನದಿಂದ ಮಾತ್ರ ನಮ್ಮ ವ್ಯಕ್ತಿತ್ವದ ವಿಕಸನ, ಪರಿವರ್ತನೆ ಸಾಧ್ಯವಾಗುತ್ತದೆ. ಟಿ.ವಿ. ಇಂಟರ್‌ನೆಟ್‌ನತ್ತ ಜನರ ಒಲವು ಜಾಸ್ತಿಯಾಗಿ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತಿದೆ ಎಂದು ವಿಷಾಧಿಸಿದ ಅವರು ಪುಸ್ತಕ ಓದುವ ಹವ್ಯಾಸ ಬೆಳೆಸಕೊಳ್ಳಬೇಕು ಎಂದು ಸಲಹೆ ನೀಡಿದರು.

ಕುಂದಾಪುರ ದಕ್ಷಿಣ ರೋಟರಿ ಮಾಜಿ ಅಧ್ಯಕ್ಷ ಕೆ. ಪಾಂಡುರಂಗ ಭಟ್ ಮಾತನಾಡಿ, ವಿದ್ಯಾರ್ಥಿಗಳು ಅಮೂಲ್ಯವಾದ ಗ್ರಂಥಗಳನ್ನು ಮುಂದೆ ಓದಿದರೆ ಸಮಾಜದಲ್ಲಿ ಒಳ್ಳೆಯ ವಿದ್ಯಾವಂತನಾಗುತ್ತಾನೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಮಟ್ಟದ ಗ್ರಂಥಾಲಯಗಳಲ್ಲಿ ಇಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳನ್ನು ಗ್ರಂಥಾಲಯದತ್ತ ಆಕರ್ಷಿಸುವ ಅಧಿಕಾರಿಗಳ ಪ್ರಯತ್ನ ಶ್ಲಾಘನೀಯ ಎಂದರು.

ಮುಕಾಂಬಿಕಾ ಉಡುಪ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗ್ರಂಥಗಳ ಮಹತ್ವದ ಬಗ್ಗೆ ಕಿವಿ ಮಾತು ಹೇಳಿದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ, ಅತೀ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿ ಹಾಗೂ ಸಾರ್ವಜನಿಕರು ಗ್ರಂಥಾಲಯಕ್ಕೆ ಭೇಟಿ ನೀಡಿ ಗ್ರಂಥಾಲಯದ ಸದಸತ್ವವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು ಹಾಗೂ ಸ್ವಾಗತಿಸಿದರು.

ಕುಂದಾಪುರ ಶಾಖಾ ಗ್ರಂಥಾಲಯದ ಗ್ರಂಥಾಲಯ ಸಹಾಯಕ ಜಗದೀಶ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಪ್ರಾಥಮಿಕ ಮಟ್ಟದಿಂದ ಕಾಲೇಜು ಮಟ್ಟದವರೆಗಿನ ವಿದ್ಯಾರ್ಥಿಗಳಿಗಾಗಿ ಪುಸ್ತಕ ಓದಿ ಬಹುಮಾನ ಗೆಲ್ಲಿರಿ ಎಂಬ ಸ್ಪರ್ದೆಯನ್ನು ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

5 × 4 =