ಕುಂದಾಪುರ- ಕೃಷಿ ಕೂಲಿಕಾರರ ಸಮಾವೇಶ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮನೆ, ನಿವೇಶನ ರಹಿತರು ನಿವೇಶನ ಹಕ್ಕು ಪತ್ರಕ್ಕಾಗಿ ಒತ್ತಾಯಿಸಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿ ಹಲವಾರು ವರ್ಷಗಳಾದರೂ ನಿವೇಶನ ಹಕ್ಕು ಪತ್ರ ವಿತರಣೆಗೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಖಂಡಸಬೇಕಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರ ಸಂಘದ ರಾಜ್ಯ ಅಧ್ಯಕ್ಷ ನಿತ್ಯಾನಂದ ಸ್ವಾಮಿ ಹೇಳಿದರು.

Call us

Call us

Call us

ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ನವದೆಹಲಿಗೆ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ವಿಸ್ಕೃತ ಸಭೆಯು ಕುಂದಾಪುರ ಕಾರ್ಮಿಕ ಭವನದಲ್ಲಿ ಜರುಗಿತ್ತು. ಕೃಷಿ ಕೂಲಿಕಾರರ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ಯು. ದಾಸಭಂಡಾರಿ ಅಧ್ಯಕ್ಷತೆಯನ್ನು ವಹಿಸಿದ್ದರು. ಸಿಐಟಿಯು ಮುಖಂಡರಾದ ಎಚ್. ನರಸಿಂಹ, ಮಹಾಬಲ ವಡೇರ ಹೋಬಳಿ, ಸುರೇಶ ಕಲ್ಲಾಗರ, ಉಪಸ್ಥಿತರಿದ್ದರು. ಕೃಷಿ ಕೂಲಿಕಾರರ ಸಂಘದ ಮುಖಂಡರಾದ ರಾಜೀವ ಪಡುಕೋಣೆ, ವಿಠ್ಠಲ ಪೂಜಾರಿ ಹಂದಾಡಿ, ಉಮೇಶ ಕುಂದರ್ ಉಡುಪಿ, ರವಿರಾಜ್ ಉಡುಪಿ, ರಾಮ ಕಾರ್ಕಡ ಸಾಲಿಗ್ರಾಮ, ಮಾಧವ ಸಾಲಿಗ್ರಾಮ, ಶೋಭಾ ಸಾಲಿಗ್ರಾಮ, ಶೀಲಾವತಿ ನಾಡ, ಪದ್ಮಾವತಿ ಶೆಟ್ಟಿ, ಕಾಂಚನಮಾಲ ಕುಂಭಾಶಿ ಮುಂತಾದವರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

one × 5 =