ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಸಬ್ಲಾಡಿ ಶೀನಪ್ಪ ಶೆಟ್ಟಿ ಮೆಮೇರಿಯಲ್ ಚಾರಿಟೆಬಲ್ ಟ್ರಸ್ಟ್ ಕುಂದಾಪುರ ಇದರ ವತಿಯಿಂದ ವೈದ್ಯರಿಗೆ ಮತ್ತು ಸಿಬ್ಬಂದಿಗಳಿಗೆ ಪೂರಕವಾದ ಒಂದು ಲಕ್ಷ ಮೌಲ್ಯದ ವೈದ್ಯಕೀಯ ಸಿಬ್ಬಂದಿ ಧರಿಸುವ ಸ್ಕೃಬ್ ಸೂಟ್ ನೀಡಲಾಯಿತು.
ಈ ಸಂದರ್ಭದಲ್ಲಿ ಕೊಡುಗೆ ಸ್ವೀಕರಿಸಿ ಮಾತನಾಡಿದ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು ಅವರು, ಸಾರ್ವಜನಿಕರ ಈ ಕೊಡುಗೆ ಕೊರೋನಾ ವಾರಿಯರ್ಸ್‌ರಲ್ಲಿ ತೊಡಗಿಸಿಕೊಂಡ ವೈದ್ಯರುಗಳಿಗೆ ಮತ್ತು ಆರೋಗ್ಯ ಸಿಬ್ಬಂದಿಗಳಿಗೆ ಇನ್ನಷ್ಟು ಉತ್ಸಾಹ ತರಲಿದೆ. ಅವರ ಹಗಲಿರುಳು ಸೇವೆ ಸಾರ್ವಜನಿಕರು ಗುರುತಿಸಿದಂತಾಗುತ್ತದೆ ಎಂದು ಹೇಳಿದ ಅವರು ಇದೇ ಸಂದರ್ಭದಲ್ಲಿ ಕೊಡುಗೆ ನೀಡಿದ ಟ್ರಸ್ಟಿನ ಪರವಾಗಿ ಎನ್.ಜಯರಾಮ ಶೆಟ್ಟಿ ಸಬ್ಲಾಡಿ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕೋವಿಡ್‌ಕೇರ್ ಆಸ್ಪತ್ರೆಯ ನೋಡಲ್ ವೈದ್ಯಾಧಿಕಾರಿ ಡಾ|ನಾಗೇಶ್ ಮಾತನಾಡಿ, ಕುಂದಾಪುರ ತಾಲೂಕಿನ ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಸಬ್ಲಾಡಿ ಶೀನಪ್ಪ ಶೆಟ್ಟಿ ಟ್ರಸ್ಟಿನ ಈ ಕೊಡುಗೆ ವೈದ್ಯಕೀಯ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಅನುಕೂಲವಾಗಲಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ, ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ರೋಬರ್ಟ್ ರೆಬೆಲ್ಲೋ, ಸಬ್ಲಾಡಿ ಶೀನಪ್ಪ ಶೆಟ್ಟಿ ಮೆಮೇರಿಯಲ್ ಚಾರಿಟೆಬಲ್ ಟ್ರಸ್ಟ್‌ನ ಎನ್. ಜಯರಾಮ ಶೆಟ್ಟಿ ಸಬ್ಲಾಡಿ ಉಪಸ್ಥಿತರಿದ್ದರು. ಟ್ರಸ್ಟಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಪಡುಕೋಣೆ ಸ್ವಾಗತಿಸಿ, ವಂದಿಸಿದರು.