ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಂಬೈನಿಂದ ಬಂದು ಕ್ವಾರಂಟೈನ್‌ನಲ್ಲಿದ್ದ ಕುಂದಾಪುರ ಮೂಲದ ವ್ಯಕ್ತಿಯೋರ್ವರು (54 ವರ್ಷ) ವ್ಯಕ್ತಿಯೋರ್ವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೇ 13 ರಂದು ಎದೆನೋವು ಕಾಣಿಸಿಕೊಳ್ಳುತ್ತಿದ್ದಂತೆಯೇ ವ್ಯಕ್ತಿಯನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎದೆನೋವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಅವರನ್ನು ಮಣಿಪಾಲದದ ಖಾಸಗಿ ಆಸ್ಪತ್ರೆಗೆ ದಾಖಲಾಯಿತು. ಚಿಕಿತ್ಸ ಫಲಕಾರಿಯಾಗದೆ ವ್ಯಕ್ತಿ ಮೇ 14ರಂದು ಸಾವನ್ನಪ್ಪಿದ್ದಾರೆ.
ಕೊರೊನಾ ಶಂಕೆ ಇರುವ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲಿನ ದ್ರವನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ. ಅವರಿಗೆ ಚಿಕಿತ್ಸೆ ನೀಡಿದ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಉಡುಪಿ ಜಿಲ್ಲೆ: ಒಂದು ವರ್ಷದ ಮಗುವಿಗೆ ಕೊರೋನಾ ಪಾಸಿಟಿವ್ – https://kundapraa.com/?p=37614 .