ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನೌಷಧಿ ಅರಿವು ಕಾರ‍್ಯಕ್ರಮ ನಡೆಯಿತು.
ಇಂಡಿಯನ್ ರೆಡ್‌ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿ ಮಾತನಾಡಿ, ದುಬಾರಿ ಔಷಧಿ ಯಾವಾಗಲೂ ಗುಣ ಮಟ್ಟದ ಔಷಧಿಯಾಗಿರಬೇಕೆಂದಿಲ್ಲ, ಜನೌಷಧಿ ಕೇಂದ್ರದಲ್ಲಿ ಶೇಕಡಾ 50-90ರಷ್ಟು ಕಡಿಮೆ ದರದಲ್ಲಿ ದೊರೆಯುವ ಔಷಧಿಗಳು ಬೇರೆ ಕಡೆ ದೊರೆಯುವ ಔಷಧಿಗಳಿಗಿಂತ ಗುಣಮಟ್ಟದ್ದಾಗಿರುತ್ತದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು, ಯುವ ರೆಡ್‌ಕ್ರಾಸ್ ಕುಂದಾಪುರ ಘಟಕದ ಖಜಾಂಚಿಗಳಾದ ಶಿವರಾಮ್ ಶೆಟ್ಟಿ, ಜನೌಷಧಿ ಉಸ್ತುವಾರಿಗಳಾದ ಗಣೇಶ್ ಆಚಾರ್, ಯುವ ರೆಡ್‌ಕ್ರಾಸ್ ಕುಂದಾಪುರದ ಕಾರ್ಯಕ್ರಮ ಸಂಯೋಜಕರಾದ ಸತ್ಯನಾರಾಯಣ ಪುರಾಣಿಕ್, ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.
ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಸಹಸಂಯೋಜಕಿ ಸೌಮ್ಯ ಕುಂದರ್ ವಂದಿಸಿದರು. ವಿದ್ಯಾರ್ಥಿನಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.