ಕುಂದಾಪುರ: ನವೋದಯ ವಿದ್ಯಾರ್ಥಿಗಳ ತರಬೇತಿ ಕಾರ್ಯಾಗಾರ

Call us

Call us

ಕುಂದಾಪುರ: ಈ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಮಾಹಿತಿ, ತಿಳುವಳಿಕೆಗಳನ್ನು ಪಡೆದುಕೊಂಡು ಸತ್ಪ್ರಜೆಗಳಾಗಿ ಮೂಡಿಬರಬೇಕು. ಉನ್ನತ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೂಕ್ತ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬಾಲ್ಯದಿಂದಲೇ ಸಿದ್ಧರಾಗಬೇಕು. ಆ ನೆಲೆಯಲ್ಲಿ ಇಂಥಹ ತರಬೇತಿಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕುಂದಾಪುರ ತಾ.ಪಂ.ಅಧ್ಯಕ್ಷರಾದ ಭಾಸ್ಕರ ಬಿಲ್ಲವ ಹೇಳಿದರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಶಾಖೆಯ ನೇತೃತ್ವದಲ್ಲಿ ಸಂಘದ ನೇತಾಜಿ ಸಭಾಭವನದಲ್ಲಿ ನವೋದಯ ವಿದ್ಯಾರ್ಥಿಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Click here

Click Here

Call us

Call us

Visit Now

Call us

Call us

ಭಾರತ ದೇಶದ ಸಂಸ್ಕೃತಿ-ಸಂಸ್ಕಾರ ಶ್ರೇಷ್ಠವಾದುದು. ಈ ದೇಶವನ್ನು ಸಂಪದ್ಭರಿತಗೊಳಿಸಲು ಆನೇಕ ಮಹನೀಯರು ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ದೇಶಕ್ಕಾಗಿ ಪ್ರಾಣದ ಹಂಗನ್ನೇ ತೋರೆದು ದೇಶ ಕಾಯುವ ಸೈನಿಕರು ನಮಗಿಂದು ನಿಜವಾದ ನಾಯಕರು. ದೇಶಪ್ರೇಮವನ್ನು ಬೆಳೆಸಿಕೊಳ್ಳುವ ಮೂಲಕ ದೇಶಕ್ಕೆ ನಮ್ಮಿಂದಾದ ಕೊಡುಗೆ ನೀಡಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮುಖ್ಯ ಅತಿಥಿ ಮುಂಬಯಿ ಥಾಣೆಯ ಉದ್ಯಮಿ ರತ್ನಾಕರ ಶೆಟ್ಟಿ ಮಾತನಾಡಿ, ತಮ್ಮ ಮಕ್ಕಳಿಗೆ ನವೋದಯ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ನೀಡುವುದು ಬಹುತೇಕ ಪೋಷಕರ ಕನಸಾಗಿರುತ್ತದೆ. ಅದಕ್ಕೆ ಪೂರಕವಾಗಿ ಸರಕಾರಿ ನೌಕರರ ಸಂಘ ತರಬೇತಿ ಆಯೋಜಿಸುತ್ತಿರುವುದು ಶ್ಲಾಘನಾರ್ಹ ವಿಚಾರ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಶಾಖೆಯ ಅಧ್ಯಕ್ಷ ದಿನಕರ ಶೆಟ್ಟಿ ಮಾತನಾಡಿ, ಕಳೆದೆರಡು ವರ್ಷಗಳಿಂದ ನವೋದಯ ವಿದ್ಯಾರ್ಥಿಗಳ ತರಬೇತಿ ನೀಡಲಾಗುತ್ತಿದ್ದು, ಈ ಬಾರಿ ಸ್ವಯಂ ಪ್ರೇರಣೆಯಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ. 2014ರಲ್ಲಿ ಇಲ್ಲಿ ತರಬೇತಿ ಪಡೆದ21 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, 2015ರಲ್ಲಿ 31 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಈ ಎರಡು ವರ್ಷದಲ್ಲಿ ಕುಂದಾಪುರ ತಾಲೂಕಿನಿಂದಲೇ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ ಎಂದರು.ಈ ವರ್ಷ ಇನ್ನೂ ಹೆಚ್ಚು ಮಕ್ಕಳು ಆಯ್ಕೆ ಆದರೆ ಮಾಡಿದ ನಿಸ್ವಾರ್ಥ ಕೆಲಸಕ್ಕೆ ಆತ್ಮತೃಪ್ತಿ ಬರುತ್ತದೆ ಎಂದ ಅವರು, ಈ ಕಾರ್ಯಕ್ರಮದ ಸಂಪೂರ್ಣ ಕೀರ್ತಿ ಬಾಬು ಶೆಟ್ಟಿ ಮತ್ತು ತಂಡದವರಿಗೆ ಎಂದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ದಿವಾಕರ ಎನ್ ಖಾರ್ವಿ, ಸಂಪನ್ಮೂಲ ವ್ಯಕ್ತಿಗಳಾದ ಹೆಸಕುತ್ತೂರು ಪ್ರೌಢಶಾಲೆಯ ಗಣಿತ ಶಿಕ್ಷಕ ಬಾಬು ಶೆಟ್ಟಿ, ಸಿ.ಆರ್.ಪಿ ಗಣೇಶ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಚಂದ್ರಕಾಂತ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

6 − three =