ಕುಂದಾಪುರ ಪದವಿಪೂರ್ವ ಕಾಲೇಜು ಪಲಿತಾಂಶದಲ್ಲಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ: ಸನ್ಮಾನ

Call us

Call us

ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದ್ದ ಉತ್ತಮ ಫಲಿತಾಂಶವನ್ನು ಪಡೆದ ಸರಕಾರಿ ಕಾಲೇಜುಗಳಲ್ಲಿ ಪ್ರಥಮ ಸ್ಥಾನವನ್ನು ಕುಂದಾಪುರ ಸರಕಾರಿ ಪ.ಪೂ.ಕಾಲೇಜು ಪಡೆದಿದ್ದು ಕಾಲೇಜನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಹಾಗೂ ನಾಡುನುಡಿಯ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

Call us

Call us

Visit Now

ಕನ್ನಡ ನಾಡು ನುಡಿ, ಸಂಸ್ಕೃತಿಯು ಪ್ರತಿಯೊಬ್ಬ ಕನ್ನಡಿಗನ ಬದುಕಿನಲ್ಲಿ ಒಂದು ನಿಶ್ಚಿತ ಪ್ರಜ್ಞೆಯಾಗಿ ಆವರಿಸಿಕೊಳ್ಳಬೇಕು ಎಂದು ಅಂಕಣಕಾರ ಕೋ.ಶಿವಾನಂದ ಕಾರಂತರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಸರಕಾರಿ ಪ.ಪೂ.ಕಾಲೇಕು ಕುಂದಾಪುರ ನಾಡು-ನುಡಿ ಚಿಂತನೆ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

Click here

Call us

Call us

ಕುಂದಪ್ರಭ ಪತ್ರಿಕೆಯ ಸಂಪಾದಕರಾದ ಯು.ಎಸ್.ಶೆಣೈಯವರು ಕನ್ನಡ ಸಾಹಿತ್ಯಕ್ಕೆ ಕುಂದಾಪುರದ ಕೊಡುಗೆಗಳೇನು? ಮತ್ತು ಆ ಮೂಲಕ ಹಿರಿಯರು ಕನ್ನಡವನ್ನು ಕಟ್ಟುವ ಎಷ್ಟು ಕೆಲಸ ಮಾಡಿದ್ದಾರೆ ಎಂಬುದನ್ನು ಸವಿಸ್ತಾರವಾಗಿ ತಿಳಿಸಿದರು. ಕನ್ನಡ ನಾಡು ನುಡಿಯ ಬಗ್ಗೆ ಅತೀವ ಕಾಳಜಿ ಹೊಂದಿದ ಹೆಬ್ರಿಯ ಗಂಗಾಧರ ಅತಿಥಿಗಳಾಗಿ ಆಗಮಿಸಿ ಸ.ಪ.ಪೂ. ಕಾಲೇಜಿನಲ್ಲಿ ಉಡುಪಿ ಜಿಲ್ಲೆಯಲ್ಲೇ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದ್ದು ಶೇ 97.76 ಫಲಿತಾಂಶ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸ.ಪ.ಪೂ.ಕಾಲೇಜು ಕುಂದಾಪುರದ ಪ್ರಾಂಶುಪಾಲರಾದ ಸುಬ್ರಹ್ಮಣ್ಯ ಜೋಷಿಯವರನ್ನು ಸನ್ಮಾನಿಸಿ ಅಭಿನಂದಿಸಿದರು. ಪ್ರಾಂಶುಪಾಲರಾದ ಸುಬ್ರಹ್ಮಣ್ಯ ಜೋಷಿ ಅಧ್ಯಕ್ಷತೆ ವಹಿಸಿದ್ದರು. ಕುಮಾರಿ ನವ್ಯದೀಪ ಪ್ರಾರ್ಥಿಸಿದರು. ಉಪನ್ಯಾಸಕ ಶಿವಾನಂದ ನಾಯಕ್ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ವಿಶ್ವನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

10 + three =