ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕದಿಂದ ಉಚಿತ ಆರೋಗ್ಯ ತಪಾಸಣೆ ಹಾಗೂ ಕುಂದಾಪುರ ಪುರಸಭೆಯ 50 ಮಂದಿ ಪೌರ ಕಾರ್ಮಿಕರಿಗೆ ಸಮ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪುರಸಭೆ ಮುಖ್ಯಾಧಿಕಾರಿ ಕೆ. ಗೋಪಾಲಕೃಷ್ಣ ಶೆಟ್ಟಿ, ಪೌರ ಕಾರ್ಮಿಕರನ್ನು ಸಮ್ಮಾನಿಸಿದರು ಲಯನ್ಸ್ ಕ್ಲಬ್ ಕುಂದಾಪುರದ ಕಾರ್ಯದರ್ಶಿ ರಾಜೇಂದ್ರ ಮಾತನಾಡಿದರು ಸುಮಾರು 180 ಜನರು ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡರು. ರೆಡ್ ಕ್ರಾಸ್ ಕುಂದಾಪುರ ತಾಲೂಕು ಘಟಕದ ಸಭಾಪತಿ ಎಸ್ .ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತುಗನ್ನಾಡಿದರು.
ಈ ಸಂಧರ್ಭದಲ್ಲಿ ಲಯನ್ಸ್ ಸಂಸ್ಥೆ ಹಾಗೂ ಲೈಪ್ ಕೇರ್‌ನ ಮಾಲಕ ಸೋಮನಾಥ್, ಲಯನ್ಸ್ ಕ್ಲಬ್‌ನ ಅಧ್ಯಕ್ಷ ಕೆ. ಚಂದ್ರಶೇಖರ್, ರೆಡ್‌ಕ್ರಾಸ್ ಘಟಕದ ಕಾರ್ಯದರ್ಶಿ ವೈ ಸೀತರಾಮ ಶೆಟ್ಟಿ ಖಜಾಂಚಿ ಶಿವರಾಮ ಶೆಟ್ಟಿ ಕಾರ್ಯಕಾರಿ ಸಮಿತಿ ಸದಸ್ಯರು, ಇತರ ಲಯನ್ಸ್ ಕ್ಲಬ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.