ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘ: ಉಚಿತ ಸಾಮೂಹಿಕ ವಿವಾಹ

ಕುಂದಾಪ್ರ ಡಾಟ್ ಕಾಂ’ ಸುದ್ದಿ
ಕುಂದಾಪುರ: ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ 9ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಬುಧವಾರ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಜರುಗಿತು.

ಬಿಲ್ಲವ ಸಮಾಜದ ಗುರು–ಹಿರಿಯದ ಸಮ್ಮುಖದಲ್ಲಿ 6 ಜೋಡಿ ವಿವಾಹಿತರಾದರು. ವಧೂವರರಿಗೆ ಉಚಿತವಾಗಿ ನೀಡಲಾದ ದೋತಿ, ಶಾಲು, ಪೇಟಾ, ರವಿಕೆ ಕಣ, ಧಾರೆ ಸೀರೆ, ಬಾಸಿಂಗ ಹಾಗೂ ಮಂಗಳ ಸೂತ್ರಗಳನ್ನು ದಾನಿ ಯಶೋಧಾ ಸುಭಾಷ್ ಪೂಜಾರಿ ಸಂಗಮ್ ವಿತರಿಸಿದರು.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರಿನ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬಿಜೆಪಿ ಮುಖಂಡ ಕಿರಣ್ ಕುಮಾರ್ ಕೊಡ್ಗಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ರಾಮಕಿಶನ್ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಲಕ್ಷ್ಮೀ ಮಂಜು ಬಿಲ್ಲವ, ಶ್ರೀಲತಾ ಸುರೇಶ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಜ್ಯೋತಿ ಉದಯ್ ಪೂಜಾರಿ, ಸೂರ್ಗೋಳಿ ಚಂದ್ರಶೇಖರ ಶೆಟ್ಟಿ, ಪುರಸಭಾ ಸದಸ್ಯರಾದ ಕೆ.ಮೋಹನ್‌ದಾಸ್‌ ಶೆಣೈ, ಶೇಖರ ಪೂಜಾರಿ ಹುಂಚಾರು ಬೆಟ್ಟು, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ನಾರಾಯಣ ಬಿಲ್ಲವ ಹಳೆ ಅಳಿವೆ, ಪ್ರಧಾನ ಕಾರ್ಯದರ್ಶಿ ಮಂಜು ಬಿಲ್ಲವ, ಶ್ರೀ ನಾರಾಯಣಗುರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ದತ್ತಿ ಸಂಸ್ಥೆಯ ಕಾರ್ಯದರ್ಶಿ ಭಾಸ್ಕರ ವಿಠಲವಾಡಿ ಉಪಾಧ್ಯಕ್ಷರಾದ ಪಿ.ಗುಣರತ್ನ, ಭಾಸ್ಕರ ಬಿಲ್ಲವ ಹೇರಿಕುದ್ರು, ಚಂದ್ರ ಅಮೀನ್‌, ಜೊತೆ ಕಾರ್ಯದರ್ಶಿ ರಾಜೇಶ್ ಕಡ್ಗಿಮನೆ, ರಾಧಾ ದಾಸ್‌, ಕೋಶಾಧಿಕಾರಿ ಟಿ.ಕೆ ಕೋಟ್ಯಾನ್, ಜೊತೆ ಕೋಶಾಧಿಕಾರಿ ಶಿವಾನಂದ ಗಂಗೊಳ್ಳಿ, ಸಂಘಟನಾ ಕಾರ್ಯದರ್ಶಿ ಸುನೀಲ್ ಬಿದ್ಕಲ್‌ಕಟ್ಟೆ, ಜೊತೆ ಸಂಘಟನಾ ಕಾರ್ಯದರ್ಶಿ ಕೃಷ್ಣ ಪೂಜಾರಿ ಅಮಾಸೆಬೈಲು, ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಡ್ಗಿಮನೆ, ಯುವಕ ಮಂಡಲದ ಅಧ್ಯಕ್ಷ ಭಾಸ್ಕರ ಪೂಜಾರಿ ಹಳೆ ಅಳಿವೆ ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ಬಿಜೂರು ನವದಂಪತಿಗಳನ್ನು ಆರ್ಶೀವದಿಸಿದರು.

Leave a Reply

Your email address will not be published. Required fields are marked *

17 + 11 =