ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೊತ್ಸವ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಡಾ.ಪಾರ್ವತಿ ಜಿ. ಐತಾಳ್, ಜಿ.ಎಂ. ಉದಯ ಕುಮಾರ್, ನಾರಾಯಣ ತಂತ್ರಿ, ಗಣಪತಿ ಎಸ್.ಹೆಗ್ಡೆ, ಬೋಧಕೇತರ ಸಿಬ್ಬಂದಿ ಸರಸ್ವತಿ ಬಾ ಅವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಹೆಚ್.ಶಾಂತಾರಾಮ್ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಅರುಣಾಚಲ ಮಯ್ಯ, ರಾಜೇಂದ್ರ, ಯು.ಎಸ್. ಶೆಣೈ, ಸಂದೇಶ ಶೆಟ್ಟಿ, ರಾಘವೇಂದ್ರಚರಣ ನಾವಡ ಉಪಸ್ಥಿತರಿದ್ದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ.ಕಾರ್ತಿಕೇಯ ಮಧ್ಯಸ್ಥ ಸ್ವಾಗತಿಸಿದರು. ಪ್ರಾಧ್ಯಾಪಕ ಪ್ರಶಾಂತ ಹೆಗ್ಡೆ ವಂದಿಸಿದರು.