ಕುಂದಾಪುರ: ಮಾದಕ ವಸ್ತು ವ್ಯಸನದ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಮಾದಕ ವಸ್ತು ವ್ಯಸನ – ವಿರೋಧಿ ದಿನದ ಅಂಗವಾಗಿ ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನಡೆಯಿತು.

Click here

Click Here

Call us

Call us

Visit Now

Call us

Call us

“ಮಾದಕ ವಸ್ತು ಸೇವನೆಯು ನಮ್ಮ ಸಮಾಜದ ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ. ಈ ವ್ಯಸನದಿಂದ ಸಂಪೂರ್ಣ ದೂರವಿದ್ದು, ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು” ಎಂದು ಕುಂದಾಪುರ ಪೋಲೀಸ್ ಠಾಣಾಧಿಕಾರಿ ಸದಾಶಿವ ಗವರೋಜಿಯವರು ಕರೆ ನೀಡಿದರು.

ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರ ರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಮಾದಕ ವ್ಯಸನ ಪಿಡುಗಿನ ಗಂಭೀರ ಪರಿಣಾಮಗಳ ಬಗ್ಗೆ ಜಾಗೃತರಾಗಬೇಕೆಂದು ತಿಳಿಸಿದರು.

ಹಿಂದಿ ವಿಭಾಗ ಮುಖ್ಯಸ್ಥೆ ಜಯಶೀಲಾ ಪೈಯವರು ಅತಿಥಿಗಳಿಗೆ ಪುಪ್ಪ ನೀಡಿ ಗೌರವಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಯವರು ಕಾರ್ಯಕ್ರಮ ನಿರ್ವಹಿಸಿದರು.

Call us

Leave a Reply

Your email address will not be published. Required fields are marked *

15 + seven =