ಕುಂದಾಪುರ: ಯೋಗ ತರಬೇತಿ ಶಿಬಿರ ಉದ್ಘಾಟನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಉಡುಪಿ, ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಕುಂದಾಪುರ, ತಾಲೂಕು ಆಯುಷ್ ಘಟಕ, ಕುಂದಾಪುರ ಇವರ ಆಶ್ರಯದಲ್ಲಿ ಮತ್ತು ರೋಟರಿ ಕುಂದಾಪುರ ರಿವರ್ ಸೈಡ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕುಂದಾಪುರ ಸಹಭಾಗಿತ್ವದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಶಿಬಿರ ಕುಂದಾಪುರದ ಮಿನಿ ವಿಧಾನ ಸೌಧದ ಆವರಣದಲ್ಲಿ ಜರಗಿತು.

Click Here

Call us

Call us

ಶಿಬಿರ ಉದ್ಘಾಟಿಸಿ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಯೋಗ ಭಾರತೀಯ ಸಂಸ್ಕೃತಿಯಲ್ಲಿ ಅಮೂಲ್ಯ ವಾದ ಪದ್ಧತಿ, ಜಗತ್ತಿಗೆ ಮಹತ್ತರ ಕೊಡುಗೆಯನ್ನು ದೇಶ ಕೊಟ್ಟಿದೆ. ವಿಜ್ಞಾನ, ತಂತ್ರಜ್ಞಾನ, ಗಣಿತದಿಂದ ಹಿಡಿದು ಹಲವು ವಲಯಗಳಲ್ಲಿ ಕೊಡುಗೆಯನ್ನು ಕೊಟ್ಟಿದೆ. ಅದರಲ್ಲಿ ಯೋಗವು ಒಂದು, ಆಧ್ಯಾತ್ಮ ಯೋಗದ ಒಂದು ಭಾಗ. ನಮಗೆ ಏಕಾಗ್ರತೆ, ಸಕಾರಾತ್ಮಕ ಯೋಚನೆ ಮಾಡಲು ಮತ್ತು ಲವಲವಿಕೆಯಿಂದಿರಲು ಸಹಾಯ ಮಾಡುತ್ತವೆ. ಯೋಗಾಸನವು ಸೌಮ್ಯವಾದ ವ್ಯಾಯಾಮವಾಗಿದ್ದು ಅದು ನಿಮ್ಮ ಮನಸ್ಸನ್ನು ಶಾಂತ ಗೊಳಿಸುತ್ತದೆ ಮತ್ತು ಸಾಮಾನ್ಯ ಕಾಯಿಲೆಗಳನ್ನು ಯೋಗಾಭ್ಯಾಸದಿಂದ ತಡೆಗಟ್ಟಬಹುದು ಎಂದು ಹೇಳಿದರು.

Click here

Click Here

Call us

Visit Now

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಕುಂದಾಪುರ ತಾಲೂಕು ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ನಾಗೇಶ್, ಯೋಗ ತರಬೇತುದಾರ ವಿವೇಕ ಪೈ, ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಜಯಕರ ಶೆಟ್ಟಿ, ಉಪಸ್ಥಿತರಿದ್ದರು. ಯೋಗ ತರಬೇತುದಾರೆ ಡಾ. ಶಿಲ್ಪ ಯೋಗದ ವಿವಿಧ ಆಸನಗಳು, ಪ್ರಾಣಾಯಾಮಗಳನ್ನು ಮಾಡುವ ಮೂಲಕ ಪ್ರಾತ್ಯಕ್ಷಿಕವಾಗಿ ತರಬೇತಿ ನೀಡಿದರು.

ಜಿಲ್ಲಾಧಿಕಾರಿ ಜಿ. ಜಗದೀಶ್ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ದಂಪತಿಗಳೊಂದಿಗೆ ಅತಿಥಿಗಳಾಗಿ ಆಗಮಿಸಿ ಯೋಗಾಭ್ಯಾಸ ಮಾಡಿದರು. ಶಿಬಿರದಲ್ಲಿ ಇಲಾಖೆಯ ಸುಮಾರು 150 ಮಂದಿ ನೌಕರರು ಮತ್ತು ಸಾರ್ವಜನಿಕರು ಪಾಲ್ಗೊಂಡಿದರು.

ಪ್ರಿಯಾದರ್ಶಿನಿ ಪ್ರಾರ್ಥನೆ ಹಾಡಿದರು. ರೋಟರಿ ಕುಂದಾಪುರ ರಿವರ್ ಸೈಡ್ ಅಧ್ಯಕ್ಷ ಕೌಶಿಕ್ ಯಡಿಯಾಳ್ ಸ್ವಾಗತಿಸಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಯುಷ್ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಯೋಗ ತರಬೇತುದಾರರನ್ನು ಪರಿಚಯಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ತಾಲೂಕು ಆಯುಷ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಅಶೋಕ್ ಹೆಚ್. ವಂದಿಸಿದರು.

Call us

Leave a Reply

Your email address will not be published. Required fields are marked *

8 + 8 =