ಕುಂದಾಪುರ: ರಾಜ್ಯಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಉಡುಪಿ, ಭಂಡಾರ್‌ಕಾರ್ಸ್ ಕಾಲೇಜ್ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ ಕುಂದಾಪುರ ರಂಗ ಅಧ್ಯಯನ ಕೇಂದ್ರದಲ್ಲಿ ಗುರುವಾರ ಜರಗಿತು.

Call us

Call us

ರಾಜ್ಯ ಮೀನುಗಾರಿಕೆ, ಯುವಜನ ಸಬಲೀಖರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು.ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್.ಕೋಟ್ಯಾನ್, ಮಣಿಪಾಲ ಎಕಾಡಮಿ ಆಪ್ ಜನರಲ್ ಎಜ್ಯುಕೇಶನ್ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್, ಭಂಡಾರ್‌ಕಾರ್ಸ್ ಕಾಲೇಜ್ ಪ್ರಾಮಶುಪಾಲ ಡಾ.ನಾರಾಯಣ ಶೆಟ್ಟಿ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪದನಿಮಿತ್ತ ಸಹ ನಿರ್ದೇಶಕ ನಾಗೇಂದ್ರ ಮಧ್ಯಸ್ಥ ಎಸ್., ಉಪಸ್ಥಿತರಿದ್ದರು.

ಡಯಟ್ ಉಡುಪಿ ಪ್ರಾಂಶುಪಾಲ ಹಾಗೂ ಉಪನಿರ್ದೇಶಕ ಶೇಖರ್ ಸ್ವಾಗತಿಸಿದರು, ವಡೇರಹೋಬಳಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಚಂದ್ರಶೇಖರ್ ಕಾರ್ಯಕ್ರಮ ನಿರ್ವಹಿಸಿದರು.ಉಪ ಪ್ರಾಂಶುಪಾಲ ಚಂದ್ರಶೇಖರ್ ವಂದಿಸಿದರು.

Call us

Call us

Leave a Reply

Your email address will not be published. Required fields are marked *

2 × two =