ಕುಂದಾಪುರ: ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಮಾಹಿತಿ ಉಪನ್ಯಾಸ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕುಂದಾಪುರ ಪೊಲೀಸ್ ಠಾಣೆಯವರ ರಾಷ್ಟ್ರೀಯ ರಸ್ತೆ ಸುರಕ್ಷಾ ಸಪ್ತಾಹದ ಅಂಗವಾಗಿ ಮಾಹಿತಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

Click Here

Call us

Call us

ಕುಂದಾಪುರ ಪೊಲೀಸ್ ಠಾಣೆಯ ಸ್ಟೇಷನ್ ರೈಟರ್ ನವೀನ ಕುಮಾರ ಎಸ್. ಮಾತನಾಡಿ, ವೇಗದ ಮಿತಿಯ ಅರಿವು ಮತ್ತು ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಹಾಕಿರುವ ಅನೇಕ ಸೈನ್ ಬೋರ್ಡ್ ಗಳ ನಿಖರವಾದ ಮಾಹಿತಿ ಪಡೆದು ವಾಹನ ಚಲಾಯಿಸಬೇಕು. ಅಪಘಾತಗಳನ್ನು ತಪ್ಪಿಸುವಲ್ಲಿ ವಾಹನ ಸಂಚಾರದ ಮೂಲದಾಖಲಾತಿಯಿಲ್ಲದೇ ನಿಯಮಗಳನ್ನು ಉಲ್ಲಂಘಿಸುವುದರಿಂದ ಉಂಟಾಗುವ ಗಂಭೀರ ದುಷ್ಪರಿಣಾಮಗಳನ್ನು ನಿವಾರಿಸುವಲ್ಲಿ ಯವಜನತೆ ಪ್ರಮುಖ ಪಾತ್ರ ವಹಿಸಬೇಕು ಎಂದು ಕರೆ ನೀಡಿದರು.

Click here

Click Here

Call us

Visit Now

ಕಾರ್ಯಕ್ರಮದ ಅಧ್ಯಕ್ಷರಾದ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ್ ಶೆಟ್ಟಿಯವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ರಸ್ತೆ ಸಂಚಾರ ನಿಯಮಗಳನ್ನು ಕೇವಲ ಭಯದಿಂದ ಪಾಲಿಸುವಂತಾಗದೇ, ವಾಹನ ಚಲಾಯಿಸುವವರ ಮತ್ತು ಅನ್ಯ ವ್ಯಕ್ತಿಗಳ ಸುರಕ್ಷತೆಯ ಬಗ್ಗೆ ನಿಗಾ ವಹಿಸಿ ವಾಹನಗಳನ್ನು ಬಳಸಬೇಕೆಂದು ತಿಳಿಸಿದರು.

ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಚಂದ್ರಶೇಖರ ಕಲ್ಪತರು ಇವರು ಕಾಲೇಜಿಗೆ ಮತ್ತು ಕುಂದಾಪುರ ಪೊಲೀಸ್ ಠಾಣೆಗೆ ಥರ್ಮಲ್ ಗನ್ ಹಾಗೂ ಮಾಸ್ಕ್ ಗಳನ್ನು ಹಸ್ತಾಂತರಿಸಿದರು.

ಕುಂದಾಪುರ ಠಾಣೆಯ ಎ.ಎಸ್.ಐ ಶ್ರೀಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥೆ ಜಯಶೀಲಾ ಪೈಯವರು ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ರವಿ ಉಪಾಧ್ಯ ಕಾರ್ಯಕ್ರಮ ನಿರ್ವಹಿಸಿ ವಂದನೆ ಸಲ್ಲಿಸಿದರು.

Call us

Leave a Reply

Your email address will not be published. Required fields are marked *

4 − three =