ಕುಂದಾಪುರ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟ: ಗಂಗೊಳ್ಳಿ ಸ.ಹಿ.ಪ್ರಾ ಶಾಲೆಯ ಬಾಲಕಿಯರ ತಂಡ ಪ್ರಥಮ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ತಂಡವನ್ನು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

Call us

Call us

ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡದ ನಾಯಕಿ ಅಂಶು ಖಾರ್ವಿ ಉತ್ತಮ ಆಟಗಾರ್ತಿ ಹಾಗೂ ಸಿಂಚನಾ ಖಾರ್ವಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ತರಬೇತಿ ನೀಡಿದರು. ಸಹಶಿಕ್ಷಕಿ ಸರಿತಾ ಕೆ. ಎಸ್. ತಂಡದ ವ್ಯವಸ್ಥಾಪಕರಾಗಿ ಭಾಗವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮತಿ ಎಂ. ಹಾಗೂ ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಪೋಷಕರು ವಿಜೇತ ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

2 × two =