ಕುಂದಾಪುರ ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ ಆಚರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ವೆಂಕಟರಮಣ ಸಮೂಹ ವಿದ್ಯಾಸಂಸ್ಥೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದೊಂದಿಗೆ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

Call us

Call us

Call us

ಗಾಂಧಿ ಹಾಗೂ ಶಾಸ್ತ್ರಿಗಳ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು. ಮುಖ್ಯ ಅತಿಥಿಗಳಾಗಿ‌ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‌ನ ಸ್ಥಾನೀಯ ಆಯುಕ್ತರಾದ ಕೊಗ್ಗ ಗಾಣಿಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಹತ್ಮಾ ಗಾಂಧಿ ಹಾಗೂ ಲಾಲ್‍ ಬಹದ್ದೂರ್ ಶಾಸ್ತ್ರಿ ವಿಚಾರಧಾರೆಗಳ ಕುರಿತು ಮಾತನಾಡಿದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್‌ನ ತರಬೇತಿ ಆಯುಕ್ತರಾದ ಆನಂದ ಅಡಿಗ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕುರಿತು ಮಾತನಾಡಿದರು.

Call us

Call us

ಈ ಸಂದರ್ಭ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಬ್ರಹ್ಮಣ್ಯ, ಸಂಸ್ಥೆಯ ಬೋಧಕ,ಬೋಧಕೇತರ ವೃಂದದದವರು ಉಪಸ್ಥಿತರಿದ್ದರು.

ಸಂಸ್ಥೆಯ ಗೈಡ್ ಶಿಕ್ಷಕಿಯರಾದ ಪದ್ಮಾವತಿ, ಅಶ್ವಿನಿ ಪ್ರಾರ್ಥಿಸಿ, ಸಂಸ್ಥೆಯ ಕನ್ನಡ ಉಪನ್ಯಾಸಕರಾದ ಉದಯ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿ ಮುಖ್ಯಶಿಕ್ಷಕಿ ಪ್ರಮೀಳಾ ಡಿಸೋಜಾ ವಂದಿಸಿದರು.

Leave a Reply

Your email address will not be published. Required fields are marked *

2 × five =