ಕುಂಭಾಶಿ ಆನೆಗುಡ್ಡೆ ದೇವಳದಿಂದ ಸಹಾಯಧನ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ 100 ಮಂದಿ ಅಶಕ್ತರಿಗೆ ವೈದ್ಯಕೀಯ ನೆರವು ವಿತರಿಸುವ ಕಾರ‍್ಯಕ್ರಮ ನಡೆಯಿತು.

Call us

Call us

ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಮತ್ತು ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾದ್ಯಾಯ ಅಶಕ್ತರಿಗೆ ವೈದ್ಯಕೀಯ ನೆರವು ವಿತರಿಸಿ ದೇವರ ಪ್ರಸಾದವನ್ನು ನೀಡಿ ಹಾರೈಸಿದರು.

Call us

Call us

ಈ ಸಂದರ್ಭ ದೇವರ ದರ್ಶನಕ್ಕೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಮತ್ತು ಸಹೋದರರು ಅರ್ಚಕ ಮಂಡಳಿ ಸದಸ್ಯರು, ದೇಗುಲದ ಮ್ಯಾನೇಜರ್ ನಟೇಶ್ ಕಾರಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

five + 15 =