ಕುಂಭಾಶಿ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಬ್ರಹ್ಮರಥೋತ್ಸವ ಸಂಪನ್ನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಬ್ರಹ್ಮ ರಥೋತ್ಸವ ಮಂಗಳವಾರ ವಿಜ್ರಂಭಣೆಯಿಂದ ನಡೆಯಿತು.

Call us

Call us

Call us

ರಥೋತ್ಸವದ ಪ್ರಯುಕ್ತ ಡಿ.4 ರಿಂದ ದೇವಸ್ಥಾನದಲ್ಲಿ ಉತ್ಸವಾದಿಗಳು ಆರಂಭಗೊಂಡಿದ್ದವು. ಇಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳು ಸಂಪನ್ನಗೊಂಡವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ರಥೋತ್ಸವದ ಅಂಗವಾಗಿ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾಗಣಪತಿಯಾಗ ನಡೆಯಿತು. ಊರ ಹಾಗೂ ಪರಊರಿನಿಂದ ಬಂದಿದ್ದ ಸಾವಿರಾರು ಭಕ್ತಾದಿಗಳು, ವಿನಾಯಕ ದೇವರು ರಥರೂಢನಾಗಿ ವಿರಾಜಮಾನವಾಗುವ ದೃಶ್ಯವನ್ನು ಕಣ್ತುಂಬಿಕೊಂಡರು.

Call us

Call us

ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಅನುವಂಶಿಕ ಪರ್ಯಾಯ ಅರ್ಚಕರಾದ ಕೆ.ವೆಂಕಟರಮಣ ಉಪಾಧ್ಯಾಯ, ಅನುವಂಶಿಕ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಕೆ.ವಿಠಲ ಉಪಾಧ್ಯಾಯ, ವ್ಯವಸ್ಥಾಪಕ ನಟೇಶ್ ಕಾರಂತ್ ಇದ್ದರು.

ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ, ಸರ್ಕಲ್ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಎಸ್. ಐ ಸದಾಶಿವ ಗವರೋಜಿ ನೇತ್ರತ್ವದಲ್ಲಿ ಬಂದೋಬಸ್ತ್ ಮಾಡಲಾಗಿತ್ತು.

Leave a Reply

Your email address will not be published. Required fields are marked *

2 × three =