ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಚೈಲ್ಡ್ ಲೈನ್-1098 ಉಡುಪಿಯ ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಮಕ್ಕಳಮನೆ ಕುಂಭಾಶಿಯಲ್ಲಿ ಇತ್ತಿಚೆಗೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕುಂಭಾಶಿ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಮ್ ಶೆಟ್ಟಿ ಕುಂದಾಪುರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿದೇರ್ಶಕ ರಾಘವೇಂದ್ರ ವರ್ಣೇಕರ್, ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ, ಮಕ್ಕಳಮನೆ ಸಂಸ್ಥೆಯ ಸಿಬ್ಬಂದಿ ವಿನೀತಾ, ಕುಂದಾಪುರ ಪೋಲಿಸ್ ಠಾಣೆಯ ಸಿಬ್ಬಂದಿ ಅಶ್ವಿನ್ ಕುಮಾರ್, ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿಗಳು, ಮಕ್ಕಳ ಮನೆಯ ಸಿಬ್ಬಂದಿಗಳು ಹಾಗೂ ಮಕ್ಕಳು ಉಪಸ್ಥಿರಿದ್ದರು.
ಗಣೇಶ ಕುಂಭಾಶಿ ಇವರನ್ನು ಚೈಲ್ಡ್‌ಲೈನ್-1098 ಉಡುಪಿಯ ವತಿಯಿಂದ ಸನ್ಮಾನಿಸಲಾಯಿತು. ಮಕ್ಕಳ ಮನೆಯಲ್ಲಿರುವ ಮಕ್ಕಳಿಗೆ ಚಿತ್ರಕಲೆ ಹಾಗೂ ಕ್ರಾಫ್ಟ್ ಸ್ಪರ್ಧೆ ಏರ್ಪಡಿಸಲಾಗಿದ್ದು ವಿಜೇತರಿಗೆ ಈ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಯಿತು ಹಾಗೂ ಮಕ್ಕಳ ಮನೆಯಲ್ಲಿರುವ ಎಲ್ಲಾ ಮಕ್ಕಳಿಗೆ ಉಪಯುಕ್ತ ವಸ್ತುಗಳ ಕಿಟ್‌ನ್ನು ವಿತರಿಸಲಾಯಿತು.
ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯ ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಬಗ್ಗೆ ಪ್ರಾಸ್ತಾವಿಕ ನುಡಿಯನ್ನಾಡಿದರು. ಚೈಲ್ಡ್ ಲೈನ್-1098 ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ಕು.ನೇತ್ರಾ ಮಾಹಿತಿಯನ್ನು ನೀಡಿದರು. ಚೈಲ್ಡ್‌ಲೈನ್‌ನ ಸಿಬ್ಬಂದಿ ಕು.ಜ್ಯೋತಿ ಈ ಕಾರ್ಯಕ್ರಮವನ್ನು ನಿರೂಪಿಸಿದರು. ಹಾಗೂ ಚೈಲ್ಡ್‌ಲೈನ್ ಸಂಯೋಜಕಿ ಕು.ಕಸ್ತೂರಿ ವಂದಿಸಿದರು.