ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ: ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕುರಿತು

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಡಿ.29:
ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು, ಕಾಪು, ಹೆಬ್ರಿ, ಬ್ರಹ್ಮಾವರ ಹಾಗೂ ಕಾರ್ಕಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ನಡೆಸುವ ಸಲುವಾಗಿ, ಜನವರಿ 01, 2022 ರ ಅರ್ಹತಾ ದಿನಾಂಕಕ್ಕೆ 18 ವರ್ಷ ತುಂಬಿದ ಕೃಷಿಕರು, ಕೃಷಿಕ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರಾಗಿದ್ದು, ಕರ್ನಾಟಕ ವ್ಯವಸಾಯೋತ್ನನ್ನ ಮಾರುಕಟ್ಟೆ ಸಮಿತಿಗಳಿಗೆ ಸಂಕ್ಷಿಪ್ತವಾಗಿ ಮತದಾರರ ಪಟ್ಟಿಯನ್ನು ಪರಿಷ್ಕರಿಸಿ ಸಿದ್ಧಪಡಿಸಲು ಆಯಾಯ ತಾಲೂಕು ತಹಶೀಲ್ದಾರರನ್ನು ಅಧಿಕೃತ ಅಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿರುತ್ತದೆ.

Call us

Call us

Call us

ಸಂಬಂಧಪಟ್ಟ ಅಧಿಕಾರಿಗಳು ಕೃಷಿಕ ಮತದಾರರ ಪಟ್ಟಿಗಳನ್ನು ಪಹಣಿ ಪತ್ರಿಕೆಯ ಆಧಾರದಲ್ಲಿ ತಯಾರಿಸಲು ಜನವರಿ 17 ಕೊನೆಯ ದಿನವಾಗಿದ್ದು, ಕೃಷಿಕ ಮತದಾರರ ಪಟ್ಟಿಯ ಕರಡು ಪ್ರಕಟಣೆಯನ್ನು ಜ.18 ರಂದು ಪ್ರಕಟಿಸಿ, ಜ.18 ರಿಂದ ಫೆ.2 ರ ವರೆಗೆ ಮತದಾರರ ಕರಡು ಪಟ್ಟಿಗಳಿಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ಕಲ್ಪಿಸಿ, ಫೆ.3 ರಿಂದ 6ರ ವರೆಗೆ ಮತದಾರರ ಕರಡು ಪಟ್ಟಿಗೆ ಸಂಬAಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿ, ತಿದ್ದುಪಡಿ ಮಾಡಿ, ಫೆ. 7 ರಂದು ಕೃಷಿಕ ಮತದಾರರ ಪಟ್ಟಿಗಳ ಅಂತಿಮ ಪ್ರಕಟಣೆಯನ್ನು ಹೊರಡಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

15 − 4 =