ಕೃಷಿ ಪಂಡಿತ ಪ್ರಶಸ್ತಿ: ರೈತರಿಂದ ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೃಷಿ ವಲಯದಲ್ಲಿ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮೂಲಕ ರೈತ ಸಮುದಾಯದ ಶ್ರೇಯೋಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

Click here

Click Here

Call us

Call us

Visit Now

Call us

Call us

ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವವರು ಉಡುಪಿ ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು.

ಭಾಗವಹಿಸುವವರ ಸಂಶೋಧನೆ / ಸಾಧನೆಗಳು ಮೂಲ ಸ್ವರೂಪವಾಗಿದ್ದು , ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು. ಸದರಿ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸ ಬಯಸುವ ರೈತರುಗಳು , ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ನಿಗದಿತ ಅರ್ಜಿ ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ದಿನಾಂಕ ಜೂನ್ 20ರ ಒಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.

ಕೃಷಿ ಪಂಡಿತ ಪ್ರಶಸ್ತಿಯು ಪ್ರಥಮ ಬಹುಮಾನ ರೂ. 1,25,000 ದ್ವಿತೀಯ 1,00,000 ತೃತೀಯ 75,000 ಕೃಷಿ ಪಂಡಿತ ಉದಯೋನ್ಮುಖ ಪ್ರಶಸ್ತಿ 50, 000 ರೂ ಗಳನ್ನು ಒಳಗೊಂಡಿರುತ್ತದೆ ಎಂದು ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

4 + 6 =