ಕೆಲಸ, ಮದುವೆ ಹೆಸರಿನಲ್ಲಿ ವಂಚನೆ: ಮಾಜಿ ಪುರಸಭಾ ಸದಸ್ಯನ ಬಂಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ, ಸೆ. 04: ಮಹಿಳೆಯೋರ್ವರಿಗೆ ಸರಕಾರಿ ಕೆಲಸ ಕೊಡಿಸುವ ಭರವಸೆ ನೀಡಿ, ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ವಿವಾಹಿತ, ಮಾಜಿ ಪುರಸಭಾ ಸದಸ್ಯ ಸಂದೀಪ್ ಪೂಜಾರಿ ಕೋಡಿ ಎಂಬಾತನನ್ನು ಶುಕ್ರವಾರದಂದು ಬಂಧಿಸಲಾಗಿದೆ.

Click Here

Call us

Call us

ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು, ಆ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆಯಿಂದ ಹಣವನ್ನು ಪಡೆದು ವಂಚಿಸಿದ್ದಲ್ಲದೇ, ಆಕೆಗೆ ಬೈದು ಜಾತಿ ನಿಂದನೆ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಆ ಮಹಿಳೆ ತನ್ನ ಗೆಳತಿಯಲ್ಲಿ ಮೂಲಕ ಆಪಾದಿತನಲ್ಲಿ ವಿಚಾರಿಸಿದಾಗ ಅವರಿಗೂ ಸಹ ಅವಾಚ್ಯವಾಗಿ ಅವಹೇಳನ ಮಾಡಿದ್ದಾನೆ ಎನ್ನಲಾಗಿದೆ. ಸೆ.1ರಂದು ಸಂದೀಪ ಪೂಜಾರಿ ಮೊಬೈಲ್ ನಂಬರ್ನಿಂದ ಆತನ ಪತ್ನಿ ವಂಚನೆಗೊಳಗಾದ ಮಹಿಳೆಗೆ ಕರೆ ಮಾಡಿ ನನ್ನ ಗಂಡನ ಬಗ್ಗೆ ಮಾತನಾಡದೆ ಸುಮ್ಮನಿರಬೇಕು ಎಂದು ಅವಾಚ್ಯವಾಗಿ ಬೈದು ಬೆದರಿಕೆ ಹಾಕಿದ್ದಳು ಎಂದು ದೂರಿದ್ದಾರೆ.

Click here

Click Here

Call us

Visit Now

ಸಂತ್ರಸ್ಥ ಮಹಿಳೆ ಸಂದೀಪ ಪೂಜಾರಿ ತನಗೆ ಕೆಲಸ ಕೊಡಿಸುತ್ತೇನೆಂದು ನಂಬಿಸಿ ಹಣವನ್ನೆಲ್ಲಾ ಮೋಸದಿಂದ ಪಡೆದುಕೊಂಡಿದ್ದು ವಿವಾಹವಾಗುತ್ತೇನೆ ಎಂದು ಸುಳ್ಳು ಹೇಳಿ ವಂಚಿಸಿರುವುದಾಗಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

four × five =