ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಬೇರೆ ಶಾಲೆಗಳಿಗೆ ವರ್ಗಾವಣೆಗೊಂಡ ಮೂವರು ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಶಾಲೆಯ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಬೇರೆ ಶಾಲೆಗಳಿಗೆ ವರ್ಗಾವಣೆಗೊಂಡ ರಾಜೀವ ಶೆಟ್ಟಿ, ಸುಜಾತಾ ಹಾಗೂ ಮಂಜುಳಾ ಅವರನ್ನು ಶಾಲೆಯ ಸಹಶಿಕ್ಷಕರು ಹಾಗೂ ಎಸ್‌ಡಿಎಂಸಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಸುಮತಿ ಎಂ., ನಿವೃತ್ತ ಮುಖ್ಯ ಶಿಕ್ಷಕಿ ಸುಜಾತಾ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ ಹಾಗೂ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ವೆಂಕಟೇಶ ಕೋಟಾನ್ ಶುಭ ಹಾರೈಸಿದರು. ಶಿಕ್ಷಕರ ಪರವಾಗಿ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ ಶುಭಾಶಂಸನೆಗೈದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ರೇಣುಕಾ, ಎಸ್‌ಡಿಎಂಸಿ ಸದಸ್ಯರು, ಸಹಶಿಕ್ಷಕರು, ಗೌರವ ಶಿಕ್ಷಕಿಯರು ಮೊದಲಾದವರು ಉಪಸ್ಥಿತರಿದ್ದರು.
ಸಹಶಿಕ್ಷಕಿ ಉಷಾಕುಮಾರಿ ಸ್ವಾಗತಿಸಿದರು. ಸಹಶಿಕ್ಷಕಿಯರಾದ ಯಶೋಧಾ, ಸರಿತಾ ಕೆ.ಎಸ್., ಅನುಷಾ ಸಿ.ಬಂಗೇರ ಸನ್ಮಾನಿತರನ್ನು ಪರಿಚಯಿಸಿದರು. ಸಹಶಿಕ್ಷಕ ಶಶಿಶಂಕರ ಎಚ್.ಎಂ. ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಆಶಾಲತಾ ವಂದಿಸಿದರು.