ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮರವಂತೆ, ನಾವುಂದ, ಗುಜ್ಜಾಡಿ ಮತ್ತು ಹೊಸಾಡು ಗ್ರಾಮ ಪಂಚಾಯತ್ಗಳ ಸಂಯುಕ್ತ ಆಶ್ರಯದಲ್ಲಿ ನಾಲ್ಕು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಸಮುದಾಯದ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಶಿಬಿರವು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಡೆಯಿತು. ಮರವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ ಶಿಬಿರವನ್ನು ಉದ್ಘಾಟಿಸಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಕಾಲಕಾಲಕ್ಕೆ ಆರೋಗ್ಯ ತಪಾಣೆ ಮಾಡಿಸಿಕೊಳ್ಳುವುದರಿಂದ ವಿವಿಧ ಕಾರಣಗಳಿಂದ ಆರೋಗ್ಯದಲ್ಲಿ ಆಗುವ ಏರುಪೇರುಗಳನ್ನು ವಾಸಿಮಾಡಿಕೊಳ್ಳಬಹುದು. ಆರೋಗ್ಯ ಕೇಂದ್ರ ವ್ಯಾಪ್ತಿಯ ಕೊರಗ ಕಾಲನಿಗಳಲ್ಲಿ ಈಗ ನಿಯತಕಾಕಲಿಕವಾಗಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಆ ವೇಳೆಯಲ್ಲಿ ಕುಟುಂಬದ ಎಲ್ಲ ಜನರು ಹಾಜರಿದ್ದು ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ, ಹೊಸಾಡು ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಗುಜ್ಜಾಡಿ ಅಧ್ಯಕ್ಷ ಹರೀಶ ಮೇಸ್ತ, ಮರವಂತೆಯ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಶುಭ ಹಾರೈಸಿದರು. ಆರೋಗ್ಯ ಸಹಾಯಕ ಹುಲಿಯಪ್ಪ ಗೌಡ ಸ್ವಾಗತಿಸಿ ವಂದಿಸಿದರು. ಮರವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಪೂಜಾರಿ, ಸದಸ್ಯರಾದ ಸುಜಾತಾ, ಸುಗುಣಾ, ಸುಧಾಕರ ಆಚಾರ್, ಮರವಂತೆ ಮತ್ತು ಹೊಸಾಡು ಅಭಿವೃದ್ಧಿ ಅಧಿಕಾರಿಗಳಾದ ಹರಿಶ್ಚಂದ್ರ ಆಚಾರ್, ಪಾರ್ವತಿ, ತಾಲೂಕು ಕೊರಗ ಶ್ರೇಯೋಭಿವೃದ್ಧಿ ಸಂಘದ ಕಾರ್ಯದರ್ಶಿ ಶೇಖರ್ ಮರವಂತೆ ಇದ್ದರು. ವೈದ್ಯಾಧಿಕಾರಿ ಮತ್ತು ಸಿಬಂದಿ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಇರುವವರಿಗೆ ಚಿಕಿತ್ಸೆಗೆ ಕ್ರಮ ಕೈಗೊಂಡರು.