ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು: ದಕ್ಷಿಣ ಭಾರತದ ಖ್ಯಾತ ಪಂಚಭಾಷಾ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕುಟುಂಬಿಕರು ಹಾಗೂ ಮಹರ್ಷಿ ಆನಂದ ಗುರೂಜಿ ಕೊಲ್ಲೂರಿಗೆ ಭೇಟಿ ನೀಡಿ ಶ್ರೀ ಮೂಕಾಂಬಿಕೆಯ ದರ್ಶನ ಪಡೆದರು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಪತ್ನಿ, ಪುತ್ರ ಹಾಗೂ ಸೊಸೆ ಕ್ಷೇತ್ರದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಮರಳಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ಟಿ. ಆರ್. ಉಮ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಗೌರವಿಸಿದರು.
ಕೊಲ್ಲೂರು ದೇವಳಕ್ಕೆ ಎಸ್.ಪಿ. ಬಾಲಸುಬ್ರಹ್ಮಣ್ಯಂ, ಮಹರ್ಷಿ ಆನಂದ ಗುರೂಜಿ ಭೇಟಿ
