ಕೊಲ್ಲೂರು ದೇವಳಕ್ಕೆ ಜಿಲ್ಲಾಧಿಕಾರಿ ಭೇಟಿ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇವಳದ ಭದ್ರತೆಗೆ ಆದ್ಯತೆ: ಡಾ. ಆರ್ ವಿಶಾಲ್

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ದೇವಳದಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣದ ಬಗ್ಗೆ ಸಮಗ್ರ ತನಿಕೆ ನಡೆಸುತ್ತಿದ್ದು, ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ದೇವಳದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಭದ್ರತೆಯ ಬಗ್ಗೆ ಸಂಪೂರ್ಣ ಗಮನ ಹರಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಆರ್. ವಿಶಾಲ್ ಹೇಳಿದರು.

Call us

Call us

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಆಡಳಿತ ಕಛೇರಿ ಜಗದಾಂಭಿಕಾದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪ್ರಕರಣದ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಯವರು ನೇತೃತ್ವದಲ್ಲಿ ತನಿಕೆ ಪ್ರಗತಿಯಲ್ಲಿದ್ದು ತಪ್ಪಿತಸ್ಥರ ವಿರುದ್ಧ ಕಾನೂನು ರಿತ್ಯಾ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಪೊಲೀಸ್ ಇಲಾಖೆಗೂ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ಲೋಪ ಕಂಡಬಂದಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಲು ಸಿದ್ಧರಿದ್ದು ಸೂಕ್ತ ದಾಖಲೆಗಾಗಿ ಕಾಯುತ್ತಿದ್ದೇವೆ. ಆಡಳಿತಾತ್ಮಕ ದೃಷ್ಠಿಯಿಂದ ದೇವಳದ ಭದ್ರತೆಯನ್ನು ಬಲಪಡಿಸುವ ಬಗ್ಗೆ ಈಗಾಗಲೇ ಕಾರ್ಯೋನ್ಮಕರಾಗಿದ್ದೇವೆ. ಕುಂದಾಪ್ರ ಡಾಟ್ ಕಾಂ ಸುದ್ದಿ ದೇವಳದ ವ್ಯವಸ್ಥೆಯನ್ನು ಪಾರದರ್ಶಕಗೊಳಿಸುವುದು ಕಾರ್ಯ ದೊಡ್ಡ ಮಟ್ಟದಲ್ಲಿ ನಡೆಯಬೇಕಿದ್ದು, ಹಂತ ಹಂತವಾಗಿ ಒಂದೊಂದೆ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಗಮನ ಹರಿಸಲಾಗುವುದು ಎಂದವರು ಹೇಳಿದರು.

ಭದ್ರತೆಯ ದೃಷ್ಠಿಯಿಂದ ದೇವಳದ ಎಲ್ಲಾ ಕಡೆಗಳಲ್ಲಿಯೂ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇವುಗಳನ್ನು ನಿರ್ವಹಿಸಲು ಪೊಲೀಸ್ ಇಲಾಖೆಯೊಂದಿಗೆ ದೇವಳದಲ್ಲಿ ಒಬ್ಬ ಪರಿಣತ ವ್ಯಕ್ತಿಯನ್ನು ನೇಮಿಸುವ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇದಕ್ಕಾಗಿ ನಿವೃತ್ತ ಪೊಲೀಸ್ ಅಧಿಕಾರಿ ಅಥವಾ ಸೇನೆಯಿಂದ ನಿವೃತ್ತಿ ಪಡೆದ ವ್ಯಕ್ತಿಯ ಹುಡುಕಾಟದಲ್ಲಿದ್ದೇವೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ

Call us

Call us

ಅನಧಿಕೃತ ಕಟ್ಟಡಗಳ ಬಗ್ಗೆ ಕ್ರಮ, ತ್ಯಾಜ್ಯ ವಿಲೇವಾರಿಗೆ ಆದ್ಯತೆ: ಕೊಲ್ಲೂರು ಕ್ಷೇತ್ರದಲ್ಲಿ ಹೇಗೆಂದರೆ ಹಾಗೆ ಕಟ್ಟಡ ನಿರ್ಮಿಸುವವರ ಬಗ್ಗೆ ಎಚ್ಚರ ವಹಿಸುವಂತೆ ಈಗಾಗಲೇ ಸ್ಥಳಿಯಾಡಳಿತಕ್ಕೆ ತಿಳಿಸಲಾಗಿದೆ. ಘನತ್ಯಾಜ್ಯ ವಿಲೇವಾರಿಗೆ ವಾಹನ, ಸುಮಾರು ೨೫ಲಕ್ಷ ರೂ. ರಸ್ತೆ ವೆಚ್ಚದ ರಸ್ತೆಗೆ ಅನುಮೋದನೆ ನೀಡಲಾಗಿದೆ. ಘನತ್ಯಾಜ್ಯ ನಿರ್ವಹಣೆಯ ಕುರಿತು ಆಧುನಿಕ ಯಂತ್ರೋಪಕರಣ ಹಾಗೂ ಇನ್ನಿತರ ವ್ಯವಸ್ಥೆ ಒದಗಿಸಲು ಕೊಲ್ಲೂರು ದೇವಳದ ವತಿಯಿಂದ ಸಾಧ್ಯವಾದಷ್ಟು ಸಹಕಾರ ನೀಡವರ ಭರವಸೆ ನೀಡಲಾಗಿದೆ ಎಂದರು.

66ಕೋಟಿ ವೆಚ್ಚದಲ್ಲಿ ಕೊಲ್ಲೂರಿನ ಅಭಿವೃದ್ಧಿಗಾಗಿ ಒಳಚರಂಡಿ, ಕುಡಿಯುವ ನೀರು ಹಾಗೂ ದೇವಳದ ಭೋಜನಾಲಯ ನಿರ್ಮಾಣಕ್ಕೆ ಕಾರ್ಯಯೋಜನೆಯನ್ನು ಈಗಾಗಲೇ ರೂಪಿಸಲಾಗಿದೆ. ಒಳಚರಂಡಿ ಕಾಮಗಾರಿಗೆ ಭೂಸ್ವಾಧಿನ ಪ್ರಕ್ರಿಯೆ ನಡೆಸಲಾಗುತ್ತಿದೆ. ಕಳೆದ ವಾರವಷ್ಟೇ ಪರಿಣಿತರ ತಂಡವೊಂದು ಕೊಲ್ಲೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇಲ್ಲಿನ ಅಗತ್ಯತೆಗಳ ಬಗ್ಗೆ ಶೀಘ್ರವೇ ವರದಿ ನೀಡಲಿದೆ ಎಂದರು.

ಮಾ.30 ರಥೋತ್ಸವ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವಾರ್ಷಿಕ ರಥೋತ್ಸವ ಮಾ.30ರಂದು ಜರುಗಲಿದ್ದು, ಪ್ರತಿ ವರ್ಷದಂತೆ ಸುವ್ಯವಸ್ಥಿತವಾಗಿ ಜರುಗುವಂತೆ ಎಲ್ಲಾ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ ಎಂದವರು ಹೇಳಿದರು.

_MG_6918_MG_6902 _MG_6908 _MG_6909 _MG_6911 _MG_6916

Leave a Reply

Your email address will not be published. Required fields are marked *

eighteen − eleven =