ಕೊಲ್ಲೂರು ದೇವಳಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Call us

ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಅವರೊಂದಿಗೆ ಆಗಮಿಸಿದ್ದ ಕುಮಾರಸ್ವಾಮಿ ಅವರು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಬಳಿಕ ಕೊಲ್ಲೂರಿಗೆ ತೆರಳಿ ದೇವಿಯ ದರ್ಶನ ಪಡೆದು ನವಚಂಡಿಕಾ ಯಾಗ ನೆರವೇರಿಸಿದರು. ಮಧ್ಯಾಹ್ನದ ಭೋಜನವನ್ನು ಅವರು ದೇವಳದಲ್ಲಿಯೇ ಸವಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಜೊತೆಗಿದ್ದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳೆರಡು ಧರ್ಮ ಹಾಗೂ ಸೆಲ್ಯೂಲರ್ ಮುಖವಾಡ ಧರಿಸಿಕೊಂಡು ಯುವ ಜನರ ದಿಕ್ಕು ತಪ್ಪಿಸುತ್ತಿದೆ. ಗೋರಕ್ಷಣೆ ಮುಂತಾದ ವಿಚಾರಗಳಿಗೆ ಕರಾವಳಿಯ ಯುವಕರನ್ನು ಎತ್ತಿಕಟ್ಟಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ನಡೆಯುತ್ತಿದೆ. ಆದರೆ ಪ್ರಜ್ಞಾವಂತೆ ಜಿಲ್ಲೆಯ ಯುವಕರು ಈ ಬಗ್ಗೆ ಯೋಚಿಸಬೇಕಿದೆ ಎಂದ ಅವರು ಲೋಕಕಲ್ಯಾಣಾರ್ಥವಾಗಿ ನವಚಂಡಿಕಾ ಯಾಗ ನೆರವೇರಿಸಿರುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

four × three =