ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ನ.18: ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಏ.26ರಂದು ಕೊಲ್ಲೂರು ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಕೆರಾಡಿ ಚಂದ್ರಶೇಖರ ಶೆಟ್ಟಿ ಆಯ್ಕೆಯಾಗಿದ್ದು, ಇದನ್ನು ಪ್ರಶ್ನಿಸಿ ಸಮಿತಿ ಸದಸ್ಯರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಧೀಶ ಕೃಷ್ಣ ಎಸ್.ದೀಕ್ಷಿತ್ ಆಯ್ಕೆ ಪ್ರಕ್ರಿಯೆ ರದ್ದುಗೊಳಿಸಿದ್ದಾರೆ.
ಗಣೇಶ್ ಕಿಣಿ ಮಾ.24, ಚಂದ್ರಶೇಖರ ಶೆಟ್ಟಿ ಏ.15ರಂದು ಸಮಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೂ ಅವರನ್ನು ಹಾಲಿ ಸಮಿತಿ ಸದಸ್ಯರೆಂದು ಪರಿಗಣಿಸಿ ಏ.26ರಂದು ನಡೆದ ಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡಿ, ಚಂದ್ರಶೇಖರ ಶೆಟ್ಟಿ ಅವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಸಮಿತಿ ಸದಸ್ಯರೇ ಅಲ್ಲದಿದ್ದವರು ಸಭೆಯಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ಕೊಲ್ಲೂರು ದೇವಸ್ಥಾನ ಅಧ್ಯಕ್ಷರ ಆಯ್ಕೆಗೆ ಮುನ್ನ ಅಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಮತ್ತು ಬೆಳ್ವೆ ಗಣೇಶ್ ಕಿಣಿ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದಸ್ಯರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಅಧ್ಯಕ್ಷರ ಆಯ್ಕೆ ಸರಿಯಾದ ಕ್ರಮವಲ್ಲ್ಲ ಎಂದು ಆಡಳಿತ ಮಂಡಳಿ ಸದಸ್ಯ ಗೋಪಾಲಕೃಷ್ಣ ನಾಡ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ:
► ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆರಾಡಿ ಚಂದ್ರಶೇಖರ ಶೆಟ್ಟಿ ಆಯ್ಕೆ – https://kundapraa.com/?p=47698 .