ಕೊಲ್ಲೂರು ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಮುಂದುವರಿಕೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೆರಾಡಿ ಚಂದ್ರಶೇಖರ ಶೆಟ್ಟಿ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಮಾನ್ಯ ಮಾಡಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ, ದ್ವಿಸದಸ್ಯ ಪೀಠ ತಡೆ ನೀಡಿದೆ.

Call us

Call us

Call us

ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ಮುನ್ನ ಚಂದ್ರಶೇಖರ ಶೆಟ್ಟಿ ಹಾಗೂ ಬೆಳ್ವೆ ಗಣೇಶ್ ಕಿಣಿ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರಿಂದ ಅಧ್ಯಕ್ಷರ ಆಯ್ಕೆಪ್ರಕ್ರಿಯೆಯಲ್ಲಿ ಪಾಲೊಂಡಿದ್ದ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠ ರಾಜಿನಾಮೆ ನಂತರ ಅಧ್ಯಕ್ಷರ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾಗಿರುವ ಸಿಂಧುವಲ್ಲ ಎಂದು ಚಂದ್ರಶೇಖರ ಶೆಟ್ಟಿ ಅಧ್ಯಕ್ಷರ ಆಯ್ಕೆ ರದ್ದು ಮಾಡಿತ್ತು.

Call us

Call us

ಏಕ ಸದಸ್ಯ ಪೀಠ ನೀಡಿದ ಆದೇಶ ಪ್ರಶ್ನಿಸಿ ಚಂದ್ರಶೇಖರ ಶೆಟ್ಟಿ ಅಪೀಲ್ ಮಾಡಿದ್ದು, ಹೈಕೋರ್ಟ್ ದ್ವಿಸದಸ್ಯ ಪೀಠವು ನ್ಯಾಯಮೂರ್ತಿ ಸಚಿನ್ ಶಂಕರ ಮಗದುಮ್ ಏಕ ಸದಸ್ಯ ಪೀಠ ಆದೇಶಕ್ಕೆ ಬುಧವಾರ ತಡೆ ನೀಡಿ ಚಂದ್ರಶೇಖರ ಶೆಟ್ಟಿ ಅಧ್ಯಕ್ಷರಾಗಿ ಮುಂದುವರಿಯುವಂತೆ ಆದೇಶ ಮಾಡಿದ್ದಾರೆ.

ವ್ಯವಸ್ಥಾಪನಾ ಸಮಿತಿ ಆಯ್ಕೆಯಾಗಿ ಆರು ತಿಂಗಳು ಕಳೆದರೂ ಸಮಿತಿ ಅಧ್ಯಕ್ಷರ ಆಯ್ಕೆ ವಿಳಂಬ ಮಾಡಿದ್ದರಿಂದ ಇಬ್ಬರು ಸದಸ್ಯರಾದ ಕೆರಾಡಿ ಚಂದ್ರಶೇಖರ ಶೆಟ್ಟಿ ಹಾಗೂ ಬೆಳ್ವೆ ಗಣೇಶ್ ಕಿಣಿ ರಾಜಿನಾಮೆ ಸಲ್ಲಿಸಿದ್ದರು. ಆದರೆ ಅವರ ರಾಜಿನಾಮೆ ಅಂಗೀಕಾರವಾಗಿದ ಕಾರಣ ಪ್ರಥಮ ವ್ಯವಸ್ಥಾಪನಾ ಸಮಿತಿ ಸಭೆಯ ನೋಟೀಸ್ ಅವರಿಗೂ ಕಳುಹಿಸಲಾಗಿತ್ತು. ಅದರಂತೆ ಅವರು ಸಭೆಯಲ್ಲಿ ಭಾಗವಹಿಸಿದ್ದು, ಕೆರಾಡಿ ಚಂದ್ರಶೇಖರ ಶೆಟ್ಟಿ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಇದನ್ನು ಇನೋರ್ವ ಅಧ್ಯಕ್ಷ ಆಕಾಂಕ್ಷಿ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.

Leave a Reply

Your email address will not be published. Required fields are marked *

nineteen − fourteen =