ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಳದ ಮಹನವರಾತ್ರಿ ಮಹೋತ್ಸವಕ್ಕೆ ಗುರುವಾರ ಶಾಸ್ತ್ರೋಕ್ತ ವಿದಿವಿಧಾನಗಳೊಂದಿಗೆ ಚಾಲನೆ ನೀಡಲಾಯಿತು.
ಬೆಳಿಗ್ಗೆ 7.30ಕ್ಕೆ ಗಣಪತಿ ಪ್ರಾರ್ಥನೆ, ಬೆಳಿಗ್ಗೆ 8.45ಕ್ಕೆ ನವರಾತ್ರಿ ಕಲಶ ಸ್ಥಾಪನೆಯೊಂದಿಗೆ ಮಹಾನವರಾತ್ರಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರಕಿತು. ದೇವಳದ ತಂತ್ರಿ ಡಾ. ಕೆ.ರಾಮಚಂದ್ರ ಅಡಿಗ ಧಾರ್ಮಿಕ ವಿಧಿ ನೆರವೇರಿಸಿದರು.
ಈ ಸಂದರ್ಭ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ದೇವಳದ ವ್ಯವಸ್ಥಾಪನಾ ಸಮಿತಿ ಆದ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ದೇವಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಪಿ.ಬಿ ಮಹೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರತ್ನಾ ರಮೇಶ್ ಕುಂದರ್, ಸಂಧ್ಯಾ ರಮೇಶ್, ಗೋಪಾಲಕೃಷ್ಣ ನಾಡ, ಗಣೇಶ ಕಿಣಿ, ಡಾ. ಅತುಲ್‌ಕುಮಾರ ಶೆಟ್ಟಿ, ಜಯಾನಂದ ಹೋಬಳಿದಾರ್, ಕೆ.ಪಿ ಶೇಖರ್,ಸಹಾಯಕ ಕಾರ್ಯನಿರ್ವಹಣಾಧಿಕಾರಿ ಗೋವಿಂದ ನಾಯ್ಕ್ ಉಪಸ್ಥಿತರಿದ್ದರು.
