ಕೊಲ್ಲೂರು: ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಮೃತ

Call us

Call us

ಕೊಲ್ಲೂರು: ಸಮೀಪದ ಹಾಲ್ಕಲ್ ಆಶ್ರಮದ ಬಳಿ ಗುರುವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದ ಸವಾರ ಮೃತಪಟ್ಟ ಘಟನೆ ನಡೆದಿದೆ.

Call us

Call us

Call us

ಸ್ಥಳೀಯ ನಿವಾಸಿ ನಾಗೇಶ ದಾಸ್ (58) ಮೃತಪಟ್ಟ ದುರ್ದೈವಿ. ದಾಸ್ ಅವರು ಕೊಲ್ಲೂರು ರಾಜ್ಯ ಹೆದ್ದಾರಿ ಹಾಲ್ಕಲ್‌ನಲ್ಲಿ ಹೋಟೆಲ್ ಹಾಗೂ ದಿನಸಿ ಅಂಗಡಿ ನಡೆಸುತ್ತಿದ್ದು, ಮಧ್ಯಾಹ್ನ ಸುಮಾರು 12:30ರ ವೇಳೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಕೊಲ್ಲೂರು ಕಡೆಗೆ ಹೋಗುತ್ತಿರುವಾಗ ಆಕಸ್ಮಿಕವಾಗಿ ವಾಹನಕ್ಕೆ ಅಡ್ಡ ಬಂದ ದನವನ್ನು ತಪ್ಪಿಸುವ ಪ್ರಯತ್ನದಲ್ಲಿ ರಸ್ತೆಗೆ ಬಿದ್ದು ಸಾವನಪ್ಪಿದ್ದಾರೆ. ಇವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

two × 3 =