ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ: ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಚಾಲನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು,ಮಾ.19:
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ಗಣಪತಿ ಪ್ರಾರ್ಥನೆ, ನಾಂದಿ ಪುಣ್ಯಾಹ, ಅಂಕುರಾವಾಸ ಸಿಂಹಯಾಗದ ನಂತರ (ವೃಷಭಲಗ್ನ) ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು.

Call us

Call us

ದೇವಳದಲ್ಲಿ ಮಾ.18ರಿಂದ ಮಾ.27ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ಜರುಗಲಿದೆ. ಮಾ.19ರ ರಾತ್ರಿ ಮಯೂರಾರೋಹಣೋತ್ಸವ, ಮಾ.20ರ ರಾತ್ರಿ ಡೋಲಾರೋಹಣೋತ್ಸವ, ಮಾ.21ರ ರಾತ್ರಿ ಪುಷ್ಪಮಂಟಪಾರೋಹಣೋತ್ಸವ, ಮಾ.22ರ ರಾತ್ರಿ ವೃಷಭಾರೋಹಣೋತ್ಸವ, ಮಾ.23ರ ರಾತ್ರಿ ಗಜಾರೋಹಣೋತ್ಸವ, ಮಾ.24ರ ಬೆಳಿಗ್ಗೆ ಶಿಖರ ಪ್ರತಿಷ್ಠೆ, ಸಂಜೆ ಹಿರೇರಂಗಪೂಜೆ, ರಾತ್ರಿ ಸಿಂಹಾರೋಹಣೋತ್ಸವ ಜರುಗಲಿದೆ. ಮಾ.25ರಂದು ಬೆಳಿಗ್ಗೆ ಮುಹೂರ್ತ ಬಲಿ, ಕ್ಷಿಪ್ರಬಲಿ, ರಥಬಲಿ ನಂತರ ಮಧ್ಯಾಹ್ನ ಮಿಥುನ ಲಗ್ನ ಮುಹೂರ್ತದಲ್ಲಿ ರಥಾರೋಹಣ ನಡೆಯಲಿದೆ. ಸಂಜೆ ಶ್ರೀಮನ್ಮಹಾರಥೋತ್ಸವ ಜರುಗಲಿದೆ. ಮಾ.26ರ ರಾತ್ರಿ ಓಕುಳಿ, ಅವಭೃತಸ್ನಾನಾದಿ ಕರ್ಮಗಳು ನಡೆಯಲಿದ್ದು, ಮಾ೨೭ರ ಬೆಳಿಗ್ಗೆ ಅಶ್ವಾರೋಹಣೋತ್ಸವದ ಬಳಿಕ ಮಹಾಪುರ್ಣಾಹುತಿ, ಧ್ವಜಾವರೋಹಣ, ಪೂರ್ಣಕುಂಭಾಭಿಷೇಕ ಹಾಗೂ ಅಂಕುರ ಪ್ರಸಾದ ವಿತರಣೆಯಾಗಲಿದೆ. ಅಲ್ಲದೇ ಜಾತ್ರಾ ಅವಧಿಯ ಆರು ದಿನ ಪ್ರತಿಸಂಜೆ ೫ಕ್ಕೆ ಮಾಂಗಲ್ಯೋತ್ಸವ (ಕಟ್ಟೆ ಉತ್ಸವ) ನಡೆಯಲಿದೆ.

Call us

Call us

ಧ್ವಜಾರೋಹಣದ ವೇಳೆ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್. ಪಿ. ಬಿ. ಮಹೇಶ್, ಎಇಒ ಗೋವಿಂದ ನಾಯಕ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ. ಅತುಲ್‌ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಬೆಳ್ವೆ ಗಣೇಶ ಕಿಣಿ, ಕೆ. ಪಿ. ಶೇಖರ್, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ್, ದೇವಳದ ಅರ್ಚಕರಾದ ನಾರ್ಸಿ ಗೋವಿಂದ ಅಡಿಗ, ಕೆ. ಎನ್. ಸುಬ್ರಹ್ಮಣ್ಯ ಅಡಿಗ, ಸುರೇಶ ಭಟ್, ಗಜಾನನ ಜೋಯಿಸ್ ಮತ್ತಿತರರು ಇದ್ದರು. ಮಧ್ಯಾಹ್ನ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿತು. ಸಂಜೆ ಯಾಗಶಾಲಾ ಪ್ರವೇಶ, ರಜ್ಜು ಬಂಧನ, ಮುಹೂರ್ತಬಲಿ, ಭೇರಿತಾಡನ, ಕೌತುಕ ಬಂಧನದ ಬಳಿಕ ರಾತ್ರಿ ನಗರೋತ್ಸವ ನಡೆಯಿತು.

ಶ್ರೀ ಮೂಕಾಂಬಿಕಾ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಈಗಾಗಲೇ ಸಕಲ ಸಿದ್ದತೆ ಮಾಡಲಾಗಿದೆ. ಕೋವಿಡ್-19 ಕಾರಣದಿಂದ ಸರಕಾರದ ಮಾರ್ಗಸೂಚಿಯಂತೆ ಉತ್ಸವಗಳನ್ನು ಆಚರಿಸುವಂತೆ ಜತೆಗೆ ಭಕ್ತರು ಉತ್ಸವದ ಯಶಸ್ಸಿಗೆ ಸಹಕರಿಸುವಂತೆ ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್. ಪಿ. ಬಿ. ಮಹೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಚಿನ್ನ ಲೇಪನದ ಶಿಖರ ಪ್ರತಿಷ್ಠೆ
ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ಬೆಳಿಗ್ಗೆ ದೇವಳದ ಪ್ರಧಾನ ಅರ್ಚಕ ಹಾಗೂ ತಂತ್ರಿ ಡಾ. ಕೆ. ರಾಮಚಂದ್ರ ಅಡಿಗ ನೇತೃತ್ವದಲ್ಲಿ ದೇವಳದ ಪಶ್ಚಿಮ ದ್ವಾರ (ಆನೆಬಾಗಿಲು)ಕ್ಕೆ ಚಿನ್ನದ ಲೇಪನದ ಶಿಖರ (ಸ್ವರ್ಣಕಲಶ) ಪ್ರತಿಷ್ಠೆ ಮಾಡಲಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಎಸ್. ಪಿ. ಬಿ. ಮಹೇಶ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ. ಅತುಲ್‌ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ, ಬೆಳ್ವೆ ಗಣೇಶ ಕಿಣಿ, ಕೆ. ಪಿ. ಶೇಖರ್, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ್, ದೇವಳದ ಅರ್ಚಕರಾದ ನಾರ್ಸಿ ಗೋವಿಂದ ಅಡಿಗ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

16 − 13 =