ಕೊಲ್ಲೂರು: ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಪ್ರಶಸ್ತಿ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು: ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ 2015-16ನೇ ಸಾಲಿನಲ್ಲಿ ಸಂಘದ ಇತಿಹಾಸದಲ್ಲಿ ಗಮನಾರ್ಹ ಸಾಧನೆ ಮಾಡಿರುವುದನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.

Call us

ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಜರುಗಿದ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರಕುಮಾರ್ ಅವರು ಸಹಕಾರಿ ಅಧ್ಯಕ್ಷ ವಿಶ್ವೇಶ್ವರ ಹೆಗ್ಡೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವರಾಮ ಪೂಜಾರಿ ಯಡ್ತರೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಸಹಕಾರಿ ಸಂಘವು 2015-16ನೇ ಸಾಲಿನಲ್ಲಿ ಎಲ್ಲಾ ವ್ಯವಹಾರದಲ್ಲಿರೂ ಗುರಿ ಮೀರಿದ ಸಾಧನೆಗೈದಿದ್ದು, ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡಿ ಪ್ರಗತಿ ಸಾಧಿಸಿರುವುದಲ್ಲದೇ ೫೭.೭೭ಲಕ್ಷ ಲಾಭ ಗಳಿಸಿದೆ.

ಸಮಾರಂಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಿರ್ದೇಶಕರಾದ ರಾಜು ಪೂಜಾರಿ, ರಘುರಾಮ ಶೆಟ್ಟಿ, ಕೊಲ್ಲೂರು ವ್ಯವಸಾಯ ಸೇವಾ ಸಹಕಾರಿಯ ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ, ನಿರ್ದೇಶಕ ಚಂದ್ರ ಬಳೆಗಾರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

twelve − eleven =