ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಟೇಶ್ವರ ಗ್ರಾಮದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮವು ನವೆಂಬರ್ 18ರಿಂದ 20ರ ವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನವೆಂಬರ್ 18 ರ ಬೆಳಗ್ಗೆ 6 ರಿಂದ ನವೆಂಬರ್ 19ರ ರಾತ್ರಿ 12ರ ವರೆಗೆ ನಿಷೇಧಿಸಲಾಗಿದೆ.
ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಕುಂದಾಪುರ ಪೊಲೀಸ್ ಠಾಣಾ ಸರಹದ್ದಿನ ಕೋಟೇಶ್ವರ, ಹಂಗಳೂರು ಹಾಗೂ ಗೋಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಬಕಾರಿ ಸನ್ನದುಗಳನ್ನು ಮುಚ್ಚುವಂತೆ ಹಾಗೂ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೂರ್ಮಾರಾವ್ ಎಂ. ಆದೇಶ ಹೊರಡಿಸಿದ್ದಾರೆ.