ಕೋಡಿ ಕಡಲ್ಕೋರೆತ ಪ್ರದೇಶಕ್ಕೆ ಉಸ್ತುವಾರಿ ಸಚಿವ ಬೊಮ್ಮಾಯಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕೋಡಿ ಭಾಗದ ಕಡಲ್ಕೋರೆತ ಪ್ರದೇಶಕ್ಕೆ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ಕಳೆದ ಕೆಲವು ದಿನಗಳಿಂದ ನಿರಂತರವಾಗಿದ ಗಾಳಿಮಳೆ ಇರುವ ಹಿನ್ನೆಲೆಯಲ್ಲಿ ಎಂ ಕೋಡಿಯಿಂದ ಹಾಯ್ಗುಳಿ ಬಸ್ ನಿಲ್ದಾಣದ ತನಕ ಕಡಲ್ಕೋರೆತ ಉಂಟಾಗಿದ್ದು, ಸಚಿವರು ಈ ಬಗ್ಗೆ ಮಾಹಿತಿ ಪಡೆದುಕೊಂಡ ಕಡಲ್ಕೊರೆತ ತಡೆಗೋಡೆ ವಿಸ್ತರಿಸುವ ಬಗ್ಗೆ ಭರವಸೆ ನೀಡಿದರು.

ಈ ಸಂದರ್ಭ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ಮೊದಲಾದವರು ಈ ಸಂದರ್ಭ ಇದ್ದರು.

 

Leave a Reply

Your email address will not be published. Required fields are marked *

twelve + 2 =