ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚಿಗಷ್ಟೇ ಉತ್ತಮ ಸಾಧಕ ಪ್ರಶಸ್ತಿಯನ್ನು ಪಡೆದಿರುವ ಹಾಜಿ ಕೆ. ಮೊಹಿದ್ದೀನ್ ಬ್ಯಾರಿ ಅನುದಾನಿತ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಜಯಂತಿ ಹಾಗೂ ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ನ ಚಿತ್ರಕಲಾ ಶಿಕ್ಷಕ ರಮೇಶ ಹಾಂಡ ಇವರಿಗೆ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ನ ಆಡಳಿತ ಮಂಡಳಿ ಮತ್ತು ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಮಾಸ್ಟರ್ ಮೆಹಮ್ಮೂದ್, ಸಲಹಾ ಸಮಿತಿಯ ಸದಸ್ಯರಾದ ಅಬುಷೇಕ್ ಹಾಗೂ ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ನ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜ ರವರು ಉಪಸ್ಥಿತರಿದ್ದರು.