ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ್ವಾಸ್ಥ್ಯ ಸಮಾಜಕ್ಕೆ ಕಾನೂನಿನ ಅರಿವು ಅಗತ್ಯ ಸಂವಿದಾನ-ಮೂಲಭೂತ ಹಕ್ಕು-ಕರ್ತವ್ಯ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ, ಕಡ್ಡಾಯ ಶಿಕ್ಷಣ ಹಕ್ಕು ಇದರ ಅರಿವು ಅರಿತಾಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಕೋಡಿ ಬ್ಯಾರೀಸ್ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ ಹೇಳಿದರು.
ಅವರು ಕಾಲೇಜಿನಲ್ಲಿ ಮತದಾರರ ಸಾಕ್ಷರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್, ರಾಜ್ಯಶಾಸ್ತ್ರ ಉಪನ್ಯಾಸಕಿ ನಿಲುಫರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಕಲಾ ವಿದ್ಯಾರ್ಥಿನಿ ರುಕ್ಸಾನ ಸ್ವಾಗತಿಸಿ, ಪ್ರಥಮ ಕಲಾ ವಿದ್ಯಾರ್ಥಿನಿ ಫಾಯಿಝಾ ವಂದಿಸಿದರು, ಪ್ರಥಮ ಕಲಾ ವಿದ್ಯಾರ್ಥಿನಿ ರಿಫಾನ ಕಾರ್ಯಕ್ರಮ ನಿರೂಪಿಸಿದರು.