ಕೋವಿಡ್ -19ನಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬದವರು ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಸೂಚನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಸರಕಾರದ ಆದೇಶದಂತೆ ಕೋವಿಡ್ -19 ವೈರಾಣು ಸೋಂಕಿನಿಂದಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ದುಡಿಯುವ ಸದಸ್ಯ ಮೃತ ಪಟ್ಟ ಸಂದರ್ಭದಲ್ಲಿ ಮೃತರ ಕಾನೂನುಬದ್ದ ವಾರಸುದಾರರ/ಕುಟುಂಬದ ಓರ್ವ ಸದಸ್ಯರಿಗೆ ರೂ. 1 ಲಕ್ಷಗಳ ಆರ್ಥಿಕ  ಪರಿಹಾರಕ್ಕೆ ಅರ್ಜಿ ಸಲ್ಲಿಸಲು  ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದ್ದಾರೆ.

Call us

Call us

ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಸದಸ್ಯರು ಕೋವಿಡ್-19 ಸಾಂಕ್ರಾಮಿಕ ಸೋಂಕಿನಿಂದ ಮರಣ ಹೊಂದಿದ್ದರೂ ಸಹ ಒಬ್ಬ ಸದಸ್ಯರಿಗೆ ಮಾತ್ರ ರೂ.1 ಲಕ್ಷಗಳ ಪರಿಹಾರ ಪಾವತಿಸಲಾಗುತ್ತದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದಿಂದ RTGS/NEPT ಮೂಲಕ ನೇರವಾಗಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ವ್ಯಕ್ತಿಯ ವಾರಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ವ್ಯಕ್ತಿಗಳ ವಾರಸುದಾರರಿಗೆ ಪರಿಹಾರ ಪಾವತಿಸುವಂತಹ ಎಲ್ಲಾ ಪ್ರಕ್ರಿಯೆಗಳನ್ನು ಅಂತರ್ಜಾಲದ ಮೂಲಕವೇ ನಿರ್ವಹಿಸಲಾಗುವುದು.

Call us

Call us

ಅರ್ಜಿದಾರರು ಪರಿಹಾರವನ್ನು ಪಡೆಯಲು ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಿ ಅರ್ಜಿ ನಮೂನೆ 1ರಲ್ಲಿ ಮಾಹಿತಿ ಹಾಗೂ ನಮೂನೆ -2ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ಮತ್ತು ನಮೂನೆ -3ರಲ್ಲಿ ನಿರಾಪೇಕ್ಷಣಾ ಪತ್ರವನ್ನು ಭರ್ತಿ ಮಾಡಿ ಈ ಕೆಳಕಂಡ ದಾಖಲಾತಿಗಳೊಂದಿಗೆ ತಾಲ್ಲೂಕು ಕಛೇರಿಗೆ ಸಲ್ಲಿಸುವುದು.

ಕೋವಿಡ್ -19 ವೈರಾಣು ಸೋಂಕಿನಿಂದ ಮೃತಪಟ್ಟಿದ್ದಕ್ಕೆ ಸಂಬಂಧಿಸಿದಂತೆ ಕೋವಿಡ್ -19 ಪಾಸಿಟಿವ್ ರಿಪೋರ್ಟ್ (ಅಧಿಕೃತವಾಗಿ ಗುರುತಿಸಿದ ಪ್ರಯೋಗಾಲಯದಿಂದ ಪಡೆದಿರುವ) P number (patient Number) (ಕೋವಿಡ್ ದೃಢಪಟ್ಟ ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

ಅಥವಾ ರೋಗ ಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗೆಟಿವ್ ಇದ್ದವರು) ಕ್ಲೀನಿಕಲ್ ರೇಡಿಯಾಲಜಿ ಮತ್ತು ಇತರೆ ಸಂಬಂಧಿಸಿದ ಪ್ರಯೋಗಾಲಯ ವರದಿ P ) number (patient Number) (ರೋಗಿ ಸಂಖ್ಯೆ) ಈ ಮೇಲಿನ ದಾಖಲೆಗಳನ್ನು ಅರ್ಹತೆ ಪಡೆದ ವೈದ್ಯರಿಂದ ಧೃಢೀಕರಿಸಿ ಸಲ್ಲಿಸುವುದು.

ಮೃತಪಟ್ಟವರ ಆಧಾರ್ ಕಾರ್ಡ್ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ , ಅರ್ಜಿದಾರರ ಪಡಿತರ ಚೀಟಿ ಪ್ರತಿ , ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಬುಕ್ ಪ್ರತಿ 7. ಅರ್ಜಿದಾರರಿಂದ ಸ್ವಯಂ ಘೋಷಣಾ ಪತ್ರ (ನಮೂನೆ -2) ಕುಟುಂಬದ ಸದಸ್ಯರ ನಿರಾಪೇಕ್ಷಣಾ ಪತ್ರ (ನಮೂನೆ -3) ಗಳನ್ನು ಸಲ್ಲಿಸುವುದು

ಅರ್ಜಿ ನಮೂನೆಗಳನ್ನು ವೆಬ್ ಸೈಟ್ ವಿಳಾಸ www.udupidc.nic.in ಮೂಲಕ ಹಾಗೂ ಸಂಬಂಧಿಸಿದ ತಾಲೂಕು ಕಛೇರಿಯಿಂದ ಪಡೆಯ ಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

one × one =