ಕೋವಿಡ್ 3ನೇ ಅಲೆ ಎದುರಿಸಲು ಸಿದ್ದತೆ ಮಾಡಿಕೊಳ್ಳಿ: ಉಸ್ತುವಾರಿ ಸಚಿವ ಬೊಮ್ಮಾಯಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 3 ನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ , ಮಕ್ಕಳ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಾರ್ಡ್ ಗಳ ನಿರ್ಮಾಣ , ಅಗತ್ಯ ಬೆಡ್ಗಳ ವ್ಯವಸ್ಥೆ ಮತ್ತು ಚೈಲ್ಡ್ ವೆಂಟಿಲೇಟರ್ ಗಳನ್ನು ಅಳವಡಿಸಿಕೊಳ್ಳುವಂತೆ ಸೂಚನೆ ನೀಡಿದರು. ಅವರು ವೀಡಿಯೋ ಸಂವಾದದ ಮೂಲಕ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

Call us

Call us

ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದಲ್ಲಿ 50 ಕ್ಕೂ ಸಕ್ರಿಯ ಪ್ರಕರಣಗಳಿರುವ ಗ್ರಾಮ ಪಂಚಾಯತ್ ಗಳನ್ನು ಬುಧವಾರದಿಂದ ಭಾನುವಾರದವರೆಗೆ 5 ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಮಾಡುವ ಕುರಿತಂತೆ ಕ್ರಮ ಕೈಗೊಳ್ಳಿ, ಸಂಬಂಧಪಟ್ಟ ಗ್ರಾಮಗಳ ಜನತೆಗೆ ಅಗತ್ಯ ವಸ್ತುಗಳ ಖರೀದಿಗೆ ಒಂದು ದಿನ ಕಾಲಾವಕಾಶ ನೀಡಿ, ನಂತರದ ದಿನದಿಂದ ಕಂಪ್ಲೀಟ್ ಲಾಕ್ ಡೌನ್ ಮಾಡುವಂತೆ ಸಚಿವ ಬೊಮ್ಮಾಯಿ ಸೂಚನೆ ನೀಡಿದರು.

Click here

Click Here

Call us

Call us

Visit Now

ಜಿಲ್ಲೆಯಲ್ಲಿ ಪ್ರಸ್ತುತ 35 ಗ್ರಾಮ ಪಂಚಾಯತ್ ಗಳಲ್ಲಿ 50 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಈ ಗ್ರಾಮ ಪಂಚಾಯತ್ ಗಳನ್ನು ಬುಧವಾರದಿಂದ ಭಾನುವಾರದ ವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು, ಈ ಅವಧಿಯಲ್ಲಿ ಔಷಧ ಅಂಗಡಿ ಮತ್ತು ಕೃಷಿ ಚಟುವಟಿಕೆಗೆ ಮಾತ್ರ ಅವಕಾಶವಿದ್ದು, ಗ್ರಾಮಗಳ ಗಡಿಯನ್ನು ಬ್ಯಾರಿಕೇಡ್ ಮೂಲಕ ಮುಚ್ಚಲು ಕ್ರಮ ಕೈಗೊಳ್ಳಲಾಗುವುದ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಅಲ್ಲದೇ ಪ್ರತೀದಿನದ ಕೋವಿಡ್ ವರದಿಯನ್ವಯ 50ಕ್ಕೂ ಹೆಚ್ಚು ಸಕ್ರಿಯ ಪಾಸಿಟಿವ್ ಪ್ರಕರಣ ಇರುವ ಗ್ರಾಮ ಪಂಚಾಯತ್ ಗಳನ್ನೂ ಸಹ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಡಿಸಿ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಡ್ ಪ್ರಮಾಣವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವ ಬೊಮ್ಮಾಯಿ, ಹೆಚ್ಚು ಕೋವಿಡ್ ಪರೀಕ್ಷೆ ನಡೆಸಿ, ಶೀಘ್ರದಲ್ಲಿ ಫಲಿತಾಂಶ ನೀಡಿ,ಸೋಂಕಿತರಿಗೆ ತಕ್ಷಣದಿಂದ ಚಿಕಿತ್ಸೆ ಆರಂಭಿಸುವ ಮೂಲಕ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗದಂತೆ ತಡೆಯಲು ಸಾಧ್ಯವಿದೆ . ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದರು.

Call us

ಜಿಲ್ಲೆಯಲ್ಲಿ ಬ್ಲಾಂಕ್ ಫಂಗಸ್ ಚಿಕಿತ್ಸಗೆ ಅಗತ್ಯವಿರುವ ಔಷಧಗಳನ್ನು ಶೀಘ್ರದಲ್ಲಿ ಸರಬರಾಜು ಮಾಡಲಾಗುವುದು ಎಂದ ಸಚಿವರು, ಕೋವಿಡ್ ಕೇರ್ ಸೆಂಟರ್ ಗಳಿಗೆ ಆಕ್ಸಿಜಿನ್ ಕಾಂನ್ಸ್ನ್ಟ್ರೇಟರ್ ಗಳನ್ನು ಅಳವಡಿಸಿ, ರೋಗಿಗಳಿಗೆ ವೆಂಟಿಲೇಟರ್ ಗಳ ಸಮಸ್ಯೆಯಗದಂತೆ ಎಚ್ಚರವಹಿಸಿ, ಜಿಲ್ಲೆಯಲ್ಲಿ ಸಾವಿನ ಪ್ರಮಾಣವನ್ನು ತಗ್ಗಿಸಲು ಕ್ರಮ ಕೈಗೊಳ್ಳಿ ಎಂದರು.

ಬ್ಲಾಕ್ ಫಂಗಸ್   ಚಿಕಿತ್ಸೆಯನ್ನು ಎಬಿಆರ್ಕೆ ಯೋಜನೆಯಡಿ ಸೇರ್ಪಡೆ ಮಾಡಿ, ಚಿಕಿತ್ಸೆ ನೀಡಲು ಅವಕಾಶ ನೀಡುವಂತೆ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಕಾರ್ಯಗಳಿಗೆ ಬಳಸಿಕೊಳ್ಳಲು ಅವಕಾಶ ನೀಡುವಂತೆ ಜಿಲ್ಲಾದಿಕಾರಿ ಜಿ.ಜಗದೀಶ್ ಕೋರಿದರು. ಸಭೆಯಲ್ಲಿ ಶಾಸಕ ರಘುಪತಿ ಭಟ್, ಸುನಿಲ್ ಕುಮಾರ್, ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿ.ಪಂ. ಸಿಇಓ ಡಾ. ನವೀನ್ ಭಟ್, ಎಎಸ್ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿಹೆಚ್ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಕೋವಿಡ್ ನೋಡೆಲ್ ಆದಿಕಾರಿ ಡಾ. ಪ್ರಶಾಂತ್ ಭಟ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

1 × 5 =