ಕೋವಿಡ್19 ಸುರಕ್ಷಾ ಕ್ರಮಗಳೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಜಿಲ್ಲಾಧಿಕಾರಿ ಜಿ. ಜಗದೀಶ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸರ್ಕಾರದ ಮಾರ್ಗಸೂಚಿಯಂತೆ, ಕೋವಿಡ್-19 ನಿಯಂತ್ರಣದ ಸುರಕ್ಷಾ ಕ್ರಮಗಳನ್ನು ಅನುಸರಿಸಿ, ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

Click Here

Call us

Call us

ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Click here

Click Here

Call us

Visit Now

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಲು ಹಾಗೂ ಸ್ಯಾನಿಟೈಸರ್ ವ್ಯವಸ್ಥೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆ ಮತ್ತು ವೇದಿಕೆ ಮೇಲೆ ಸಹ ಸಾಮಾಜಿಕ ಅಂತರದಲ್ಲಿ ಗಣ್ಯರಿಗೆ ಆಸನ ವ್ಯವಸ್ಥೆ ಮಾಡುವಂತೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಡಿಸಿ ತಿಳಿಸಿದರು.

ಕಾರ್ಯಕ್ರಮವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡುವುದು ಸೇರಿದಂತೆ ಫೇಸ್ ಬುಕ್ ಲೈವ್ ಹಾಗೂ ಆನ್ ಲೈನ್ ಮೂಲಕ ಸಾರ್ವಜನಿಕರಿಗೆ ನೇರವಾಗಿ ತಲುಪುವಂತೆ ಎನ್.ಐ.ಸಿ ಮೂಲಕ ಅಗತ್ಯ ಕ್ರಮ ಕೈಗೊಂಡು, ಈ ಲಿಂಕ್ ಗಳ ವಿವರಗಳನ್ನು ಸಾಕಷ್ಟು ಮುಂಚಿತವಾಗಿ ಸಾರ್ವಜನಿಕರಿಗೆ ನೀಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಕಾರ್ಯಕ್ರಮದಲ್ಲಿ ಕೋವಿಡ್-9 ವಿರುದ್ದ ಹೋರಾಟದಲ್ಲಿ ಗಮನಾರ್ಹ ಸಾಧನೆ ತೋರಿದ ಕೋವಿಡ್ ವಾರಿರ್ಸ್ ಗಳನ್ನು ಸನ್ಮಾನಿಸಿ ಗೌರವಿಸುವಂತೆ ಹೇಳಿದ ಜಿಲ್ಲಾಧಿಕಾರಿಗಳು, ಕೋವಿಡ್ ನಿಂದ ಗುಣಮುಖರಾದ ಆಯ್ದ ಕೆಲವು ಮಂದಿಗೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನ ನೀಡುವಂತೆ ಹಾಗೂ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸುವAತೆ ಡಿಸಿ ಜಿ.ಜಗದೀಶ್ ತಿಳಿಸಿದರು.

Call us

ಪೊಲೀಸ್, ಹೋಂ ಗಾರ್ಡ್, ಕರಾವಳಿ ಕಾವಲು ಪಡೆ, ಅರಣ್ಯ ಇಲಾಖೆಯಿಂದ ಪಥ ಸಂಚಲನ ನಡೆಸುವಂತೆ ಹಾಗೂ ಕಾರ್ಯಕ್ರಮದಲ್ಲಿ ಕೋವಿಡ್-19 ಸುರಕ್ಷಾ ನಿಯಮಗಳ ಉಲ್ಲಂಘನೆಯಾಗದಂತೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಡಿಸಿ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಸಂಬಂದ ವಿವಿಧ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ, ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಜಗದೀಶ್, ಎಎಸ್ಪಿ ಕುಮಾರ ಚಂದ್ರ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

11 + seventeen =