ಕ್ರೀಡಾ ವಸತಿ ನಿಲಯಗಳ ಪ್ರವೇಶಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: 2021-22ನೇ ಸಾಲಿನ ರಾಜ್ಯದ ಎಲ್ಲಾ ಕ್ರೀಡಾ ವಸತಿ ಶಾಲೆ/ವಸತಿ ನಿಲಯಗಳಿಗೆ ಅರ್ಹ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆಯನ್ನು ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುವುದು.

Call us

8 ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಸೇರ್ಪಡೆಗೆ ಡಿ. 30 ಮತ್ತು 31 ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ.

ಹಿರಿಯರ ವಿಭಾಗದ ಕ್ರೀಡಾ ವಸತಿ ನಿಲಯ ಪ್ರವೇಶಕ್ಕೆ ಅಭ್ಯರ್ಥಿಗಳನ್ನು ನೇರವಾಗಿ ವಿಭಾಗ ಮಟ್ಟದಲ್ಲಿ ಆಯ್ಕೆ ಮಾಡುವುದರಿಂದ ಅಭ್ಯರ್ಥಿಗಳು ನಿಗದಿಪಡಿಸಿದ ನಮೂನೆಯಲ್ಲಿ ವೈದ್ಯಕೀಯ ಪ್ರಮಾಣಪತ್ರ ಹಾಗೂ ಧೃಢೀಕರಿಸಿದ ಜನನ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಜನವರಿ 15 ರ ಒಳಗೆ ಸಹಾಯಕ ನಿರ್ದೆಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಜಿಲ್ಲೆ ಇವರಿಗೆ ಸಲ್ಲಿಸಬಹುದು.

Call us

ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ, ಜನವರಿ 27 ರಂದು ಕಿರಿಯರ ವಿಭಾಗ ಮಟ್ಟದ ಹಾಗೂ ಜನವರಿ 28 ರಂದು ಹಿರಿಯರ ವಿಭಾಗ ಮಟ್ಟದ ಆಯ್ಕೆ ಪ್ರಕ್ರಿಯೆಯು ನಡೆಯಲಿದೆ.

ತಾಲೂಕು ಕೇಂದ್ರಗಳಲ್ಲಿ ನಡೆಯುವ ಆಯ್ಕೆ ಸಂದರ್ಭ, ಹಾಜರಿರುವ ಇಲಾಖೆಯ ತರಬೇತುದಾರರಿಂದ ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಇವರ ಕಚೇರಿಯಿಂದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2521324 ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

4 × 4 =