ಕುಂದಾಪ್ರ ಡಾಟ್ ಕಾಮ ಸುದ್ದಿ.
ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಕಾಣಿಸಿಕೊಳ್ಳುತ್ತಿದ್ದು ಈ ನಿಟ್ಟಿನಲ್ಲಿ ಜನರು ಜಾಗೃತರಾಗಬೇಕಿದೆ. ಇಂದಿನ ದಿನಗಳಲ್ಲಿ ಜನರಿಗೆ ಆರೋಗ್ಯದ ಬಗ್ಗೆ ಮಾಹಿತಿ ಅವಶ್ಯವಿದ್ದು, ವಿವಿಧ ಸಂಘ ಸಂಸ್ಥೆಗಳು ಆರೋಗ್ಯ ಮಾಹಿತಿ ಶಿಬಿರಗಳನ್ನು ಹಮ್ಮಿಕೊಳ್ಳಬೇಕಿದೆ. ಮನೆಯ ವಠಾರದಲ್ಲಿ ಶುಚಿತ್ವ ಕಾಪಾಡಿಕೊಳ್ಳುವುದರ ಮೂಲಕ ಮತ್ತು ಆರೋಗ್ಯ ತಪಾಸಣೆ ನಡೆಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದೆ ಎಂದರು ಜನಜಾಗೃತಿ ವೇದಿಕೆಯ ತ್ರಾಸಿ ವಲಯದ ನಿಕಟಪೂರ್ವ ಅಧ್ಯಕ್ಷ ಬಿ.ರಾಘವೇಂದ್ರ ಪೈ ಹೇಳಿದರು.
ಅವರು ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಗಂಗೊಳ್ಳಿಯ ಪಂಚಗಂಗಾವಳಿ ಒಕ್ಕೂಟದ ಆಶ್ರಯದಲ್ಲಿ ಜರುಗಿದ ಸಾಮಾನ್ಯ ಆರೋಗ್ಯ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಪಂಚಗಂಗಾವಳಿ ಒಕ್ಕೂಟದ ಅಧ್ಯಕ್ಷ ಎಚ್.ಎಂ. ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಲಾಶ್ರೀ ಜಿ.ಪಿ. ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರತಿಮಾ ಸ್ವಾಗತಿಸಿದರು. ಅಂಜಲಿ ಗೌರಿ ಕಾರ್ಯಕ್ರಮ ನಿರೂಪಿಸಿದರು. ಸುಜಾತಾ ಖಾರ್ವಿ ವಂದಿಸಿದರು.