ಗಂಗೊಳ್ಳಿ ಆಳಸಮುದ್ರ ಮೀನುಗಾರರ ಸಂಘ ಉದ್ಘಾಟನೆ

Call us

Call us

ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೀನುಗಾರರು ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳ ಬಗ್ಗೆ ನಿಯೋಗದೊಂದಿಗೆ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುವುದಾಗಿ ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

Call us

Call us

Call us

ಅವರು ಇತ್ತೀಚಿಗೆ ಮರವಂತೆಯ ಶ್ರೀ ವರಾಹಸ್ವಾಮಿ ದೇವಸ್ಥಾನದ ವಠಾರದಲ್ಲಿ ಗಂಗೊಳ್ಳಿ ಆಳಸಮುದ್ರ ಮೀನುಗಾರರ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಲೋಕೇಶ ಖಾರ್ವಿ ಗಂಗೊಳ್ಳಿ ಅವರು ಆಳಸಮುದ್ರ ಮೀನುಗಾರರು ಮೀನುಗಾರಿಕೆ ಸಂದರ್ಭ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಸಂಘದ ಉಪಾಧ್ಯಕ್ಷ ದುರ್ಗರಾಜ್ ಪೂಜಾರಿ ಅವರು ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಮೀನುಗಾರರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಸೆಳೆದು ಇದನ್ನು ಪರಿಹಸರಿಬೇಕೆಂದು ಒತ್ತಾಯಿಸಿದರು. ಉಪಾಧ್ಯಕ್ಷ ಮಂಜುನಾಥ ವಿಠಲವಾಡಿ, ಮಾಧವ ಖಾರ್ವಿ, ರಾಮ ಶಿರೂರು, ಕೋಶಾಧಿಕಾರಿ ನಾರಾಯಣ ಖಾರ್ವಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಮದಾಸ ಖಾರ್ವಿ ಸ್ವಾಗತಿಸಿ ವಂದಿಸಿದರು.

Call us

Call us

Leave a Reply

Your email address will not be published. Required fields are marked *

five × four =