ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಿಕ್ಷಕರು ವಿದ್ಯಾರ್ಥಿಗಳಿಂದ ಯಾವುದೇ ಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸುತ್ತಾರೆ. ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಶಿಕ್ಷಕರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಅಧ್ಯಕ್ಷ ಅರುಣ್ ಕುಮಾರ್ ಹೇಳಿದರು.
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ, ಶ್ರೀ ಗಣೇಶೋತ್ಸವ ಸಮಿತಿ, ಇಂದುಧರ ಯುವಕ ಮಂಡಲ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ಮತ್ತು ನಾಗರಾಜ ಆಚಾರ್ಯ ಶುಭಾಶಂಸನೆಗೈದರು. ಗಂಗೊಳ್ಳಿಯ ಸ.ವಿ. ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ಸಹಶಿಕ್ಷಕರಾದ ದೇವು, ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ಭೂದೇವಿ, ರೇಣುಕಾ ನಾಯಕ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂದೇಶ ಜಿ.ಟಿ., ಶಿವ ಜಿ.ಟಿ., ಮಹೇಶ ಜಿ.ಟಿ., ನಾಗಿಣಿ, ಸುಶೀಲಾ, ಸುಮಿತ್ರಾ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯದರ್ಶಿ ಶ್ರೀಕಾಂತ ಎನ್. ಸ್ವಾಗತಿಸಿದರು. ಸುಮಿತ್ರಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.