ಗಂಗೊಳ್ಳಿ: ಗುಡ್ಡೆಕೇರಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಪ್ರಾರಂಭ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬಹುನಿರೀಕ್ಷಿತ ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ರಸ್ತೆಯ ಸುಮಾರು 35 ಲಕ್ಷ ರೂ. ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿ ಪ್ರಾರಂಭಗೊಂಡಿದೆ.

Click Here

Call us

Call us

ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರ ಪ್ರಯತ್ನದ ಫಲವಾಗಿ ಗುಡ್ಡೆಕೇರಿ ರಸ್ತೆ ಕಾಂಕ್ರೀಟಿಕರಣಕ್ಕೆ ಕರ್ನಾಟಕ ನೀರಾವರಿ ನಿಗಮದ ಮೂಲಕ 35 ಲಕ್ಷ ರೂ. ಅನುದಾನ ಮಂಜೂರಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನಡೆಸಲಾಗಿದ್ದು, ಕರೋನಾ ಲಾಕ್‌ಡೌನ್ ಹಿನ್ನಲೆಯಲ್ಲಿ ಕಾಮಗಾರಿ ಆರಂಭಿಸಲು ವಿಳಂಬವಾಗಿತ್ತು. ಇದೀಗ ಕಳೆದ ಎರಡು ದಿನಗಳಿಂದ ಕಾಂಕ್ರೀಟಿಕರಣ ಕಾಮಗಾರಿ ವೇಗದಿಂದ ಸಾಗುತ್ತಿದ್ದು, ನಿಗಮದ ಇಂಜಿನಿಯರ್‌ಗಳು ಸ್ಥಳದಲ್ಲಿದ್ದು ಕಾಮಗಾರಿ ಮತ್ತು ಗುಣಮಟ್ಟದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡುತ್ತಿದ್ದಾರೆ.

Click here

Click Here

Call us

Visit Now

ಕಳೆದ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ರಸ್ತೆಗೆ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರ ಪ್ರಯತ್ನದಿಂದ ಕಾಂಕ್ರೀಟಿಕರಣ ಭಾಗ್ಯ ಕೂಡಿ ಬಂದಿದೆ. ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿ ಸಹಕರಿಸಿದ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರಿಗೆ ಪರಿಸರದ ಜನರು ಕೃತಜ್ಞತೆ ಸಲ್ಲಿಸಿದ್ದು, ಅನುದಾನ ಒದಗಿಸಲು ಶ್ರಮಿಸಿದ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

nineteen − 5 =