ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಪ್ರತಿಯೊಂದು ಸಂಪ್ರದಾಯಗಳ ಆಚರಣೆಯ ಹಿಂದೆ ವೈಜ್ಞಾನಿಕ ಹಿನ್ನೆಲೆ ಇರುತ್ತದೆ. ಅದನ್ನು ಅರ್ಥಮಾಡಿಕೊಳ್ಳುವಲ್ಲಿ ಹೆಚ್ಚಿನ ಪ್ರಯತ್ನವನ್ನು ನಾವು ಮಾಡಬೇಕಿದೆ. ಗೂಡುದೀಪ ಸ್ಪರ್ಧೆಯಂತಹ ಕಾರ್ಯಕ್ರಮಗಳು ನಮ್ಮಲ್ಲಿನ ಕಲೆಯನ್ನು ಉದ್ದೀಪನಗೊಳಿಸಲು ನೆರವಾಗುತ್ತವೆ ಎಂದು ಖ್ಯಾತ ಸ್ಯಾಕ್ಸೋಫೋನ್ ವಾದಕ ಉಮಾನಾಥ್ ದೇವಾಡಿಗ ಹೇಳಿದರು.
ಅವರು ಗಂಗೊಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ದೀಪಾವಳಿಯ ಅಂಗವಾಗಿ ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಮಾತನಾಡಿ, ಇಂತಹ ಸ್ಪರ್ಧೆಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯವಾಗುತ್ತದೆ. ಹೆಚ್ಚು ಹೆಚ್ಚು ಸಂಸ್ಥೆಗಳು ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಹೇಳಿದರು.
ಡಾಕ್ಟರ್ ಬಿ.ಆರ್.ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್. ಜಿ ಸ್ವಾಗತಿಸಿದರು. ಉಪಾಧ್ಯಕ್ಷ ಕಿರಣ್ ವಂದಿಸಿದರು. ಗೂಡುದೀಪ ಸ್ಪರ್ಧೆಯಲ್ಲಿ ನಾಗಲಕ್ಷ್ಮಿ, ನವೀನ್ ಹಾಗು ನಟರಾಜ ಕ್ರಮವಾಗಿ ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ಪಡೆದರು.